ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬ್ರಹ್ಮರಕೊಟ್ಲು ಸುಂಕ ವಸೂಲಿ ಕೇಂದ್ರದ ಬಳಿ ಕಾರು ಮತ್ತು ಟ್ಯಾಂಕರ್ ನ ಮಧ್ಯೆ ಭೀಕರ ಅಪಘಾತ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ.


ಕಾರಿನಲ್ಲಿ ಎಷ್ಟು ಜನ ಇದ್ದಾರೆ ಎಂಬ ನಿಖರ ವಾದಮಾಹಿತಿ ಇಲ್ಲ. ಕಾರಿನಲ್ಲಿದ್ದವರು ಭಟ್ಕಳ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ದಿಂದಾಗಿ ಸಂಚಾರ ಅಸ್ತವ್ಯಸ್ತ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರ ಭೇಟಿ.