Monday, January 26, 2026

ಲಾರಿ ಡಿಕ್ಕಿ ಬೈಕ್ ಸವಾರ ಸಾವು

ಬಂಟ್ವಾಳ: ಬುಲೇಟ್ ಬೈಕ್ ಮೆಲೆ ಟಿಪ್ಪರ್ ಲಾರಿ ಚಲಿಸಿದ ಪರಿಣಾಮ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಸಹ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕರೋಪಾಡಿ ಗ್ರಾಮದ ಕೇರಳ- ಕರ್ನಾಟಕ ಗಡಿಭಾಗದ ಮುಗುಳಿ ಎಂಬಲ್ಲಿ ಸಂಭವಿಸಿದೆ.



ರೌಡಿಶೀಟರ್ ಮುಗುಳಿ ನಿವಾಸಿ ಅನ್ವರ್ (28) ಮೃತಪಟ್ಟ ಸವಾರ. ಸಹ ಸವಾರ ನವಾಫ್ ಗಾಯಗೊಂಡವ.
ಕರ್ನಾಟಕದಿಂದ ಕೇರಳಕ್ಕೆ ಎಂ.ಸ್ಯಾಂಡ್ ಸಾಗಾಟ ಮಾಡುವ ಲಾರಿ ಮುಗುಳಿ ತಿರುವಿನಲ್ಲಿ ಬೈಕ್ ನ ಮೇಲೆ ಚಲಿಸಿದೆ.
ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ಆಕ್ರೋಶಭರಿತರಾಗಿ ಪ್ರತಿಭಟನೆ ನಡೆಸಿದರು.
ಕೆಲ ಹೊತ್ತು ಈ ಪ್ರದೇಶದಲ್ಲಿ ಅಶಾಂತಿಯ ವಾತವಾರಣ ತಲೆದೋರಿತ್ತು.
ಕೂಡಲೇ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಹಾಗೂ ವಿಟ್ಲ ಪೊಲೀಸರು ಸ್ಥಳ ದಲ್ಲಿದ್ದ ಜನರನ್ನು ಚದುರಿಸಿದರು.
ಕೆಲಹೊತ್ತು ಸ್ಥಳದಲ್ಲಿ ಉದ್ವಿಗ್ನದ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಪೊಲೀಸ್ ನಿಯಂತ್ರಣದಲ್ಲಿದೆ.
ಪ್ರಸ್ತುತ ಕರ್ನಾಟಕದಿಂದ ಕೇರಳಕ್ಕೆ ಹೋಗುವ ಯಾವುದೇ ವಾಹನಗಳನ್ನು ಈ ಮಾರ್ಗದಲ್ಲಿ ಸಂಚಾರ ಮಾಡಲು ಪೊಲೀಸರು ಬಿಡುತ್ತಿಲ್ಲ.ಮೃತ ಅನ್ವರ್ ರೌಡಿಶೀಟರ್ ಅಗಿದ್ದು ಅನೇಕ ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದ .

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...