Monday, July 14, 2025

ಬಸ್ಸು ಕಾರು ಡಿಕ್ಕಿ: ಅಪಾಯದಿಂದ ಪಾರು

ವಿಟ್ಲ: ಕಾರು ಹಾಗೂ ಸರ್ಕಾರಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.

ಮಂಗಳೂರು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಮತ್ತು ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ಸಿನ ನಡುವೆ ಮುಖಾಮುಖಿ ಸಂಭವಿಸಿದೆ. ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

More from the blog

‘ಶಕ್ತಿ ಯೋಜನೆʼಯಡಿ 500 ಕೋಟಿ ಮಹಿಳೆಯರ ಪ್ರಯಾಣ : ಬಿ.ಸಿ.ರೋಡ್ ನಲ್ಲಿ ಸಂಭ್ರಮಾಚರಣೆ..

ಬಂಟ್ವಾಳ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ೫೦೦ ಕೋಟಿ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ, ತಾಲೂಕು...

ಯುವವಾಹಿನಿ ಬಂಟ್ವಾಳ ಘಟಕ : ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ..

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಆಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ...

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌...

ಬಂಟರ ಸಂಘ ನರಿಕೊಂಬು – ಶಂಭೂರು ಅಧ್ಯಕ್ಷರಾಗಿ ಪ್ರೇಮನಾಥ ಶೆಟ್ಟಿ ಪುನರಾಯ್ಕೆ..

ಬಂಟ್ವಾಳ: ನರಿಕೊಂಬು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ ಅಂತರ ಅವರು ಬಂಟರ ಸಂಘ ನರಿಕೊಂಬು- ಶಂಭೂರು ಗ್ರಾಮ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆ ಆಗಿದ್ದಾರೆ. ಜು. 10 ರಂದು ಕರ್ಬೆಟ್ಟು ಭಾಸ್ಕರ ಶೆಟ್ಟಿ ವಸತಿಗ್ರಹದಲ್ಲಿ...