Friday, June 27, 2025

ಗುರುವಾಯನಕೆರೆಯಲ್ಲಿ ಹಿಟ್ ಎಂಡ್ ರನ್ ಗೆ ದ್ವಿಚಕ್ರ ವಾಹನ ಸವಾರ ಬಲಿ.

ಗುರುವಾಯನಕೆರೆ: ಸ್ಕೂಟರ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳ ದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಎಂಬಲ್ಲಿ ನಡೆದಿದೆ.

ಇಲ್ಲಿನ ಅರಫಾ ಸೇನಿಟರಿ ಮಳಿಗೆಯ ಎದುರು ಇಂದು ಬೆಳಿಗ್ಗೆ ಸ್ಕೂಟರ್ ಗೆ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ, ಕುವೆಟ್ಟು ಗ್ರಾಮದ ಪಾಂಡೇಶ್ವರ ನಿವಾಸಿ ಲಿಂಗಪ್ಪ ಮೂಲ್ಯ( 62ವ.) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಲ್ಲೇ ಪಕ್ಕದ ತೋಡಿನಿಂದ ಗೋಣಿ ಚೀಲದಲ್ಲಿ ಮರಳು ತುಂಬಿಕೊಂಡು ತನ್ನ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯಾವುದೋ ವಾಹನ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಲಿಂಗಪ್ಪ ಮೂಲ್ಯ ಅವರು ಗುರುವಾಯನಕೆರೆ ಕರ್ಣಾಟಕ ಬ್ಯಾಂಕ್ ಎಟಿಎಂ ನಲ್ಲಿ ಕಾವಲುಗಾರರಾಗಿದ್ದಾರೆ.
ಡಿಕ್ಕಿ ಹೊಡೆದ ವಾಹನಸವಾರರು ವಾಹನ ಸಹಿತ ಪರಾರಿಯಾಗಿದ್ದಾರೆ.
ಬೆಳ್ತಂಗಡಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

More from the blog

ಇಂದಿನಿಂದ ಮುಹರ್ರಮ್ ತಿಂಗಳು ಪ್ರಾರಂಭ : ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಘೋಷಣೆ..

ಮಾಣಿ: ಗುರುವಾರ ರಾತ್ರಿ ಚಂದ್ರದರ್ಶನವಾದ ಮಾಹಿತಿ ಪ್ರಬಲವಾಗಿರುವುದರಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ಹಾಗೂ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ಬಳಿ ಖಚಿತವಾದ ಕಾರಣ ಇಂದಿನಿಂದ ಮುಹರ್ರಮ್ ಪ್ರಾರಂಭ ಎಂದು ಖಾಝಿ...

Kempegowda Jayanti : ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ..

ಬಂಟ್ವಾಳ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಶಿಲ್ದಾರ್ ಅರ್ಚನಾ ಭಟ್ ಮಾತನಾಡಿ, ದೂರದೃಷ್ಟಿಯ ಚಿಂತನೆಯ ವ್ಯಕ್ತಿಯಾಗಿದ್ದ...

ವಿಟ್ಲ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಟ್ಲ ವರ್ತಕರ ಸಂಘದಿಂದ ತಯಾರಿಸಲಾದ ಪ್ಲಾಸ್ಟಿಕ್ ನಿಷೇಧದ ಸ್ಟಿಕ್ಕರ್ ನ್ನು ವರ್ತಕರ ಸಂಘದ ಸಹಕಾರದೊಂದಿಗೆ ವಿಟ್ಲ ಪೇಟೆಯ...

Installation Ceremony : ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ..

ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ...