Friday, June 27, 2025

ಕಾರು ಡಿಕ್ಕಿ: ದ್ವಿಚಕ್ರವಾಹನ ಹಿಂಬದಿ ಸವಾರೆ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕಚೇರಿ ಸಿಬ್ಬಂದಿ ಸಾವು

ಬಂಟ್ವಾಳ: ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಗಂಭೀರ ಗಾಯಗೊಂಡು ಹಿಂಬದಿ ಪ್ರಯಾಣಿಕೆ ಯುವತಿ ಯೋರ್ವಳು ಮೃತಪಟ್ಟ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವು ಎಂಬಲ್ಲಿ ಇಂದು ರಾತ್ರಿ ವೇಳೆ ನಡೆದಿದೆ.
ಕಡೆಗೋಳಿ ನಿವಾಸಿ ಶ್ಯಾಮಲಾ (27) ಮೃತ ಪಟ್ಟ ಯುವತಿ ಹಾಗೂ ಸ್ನೇಹಿತೆ ಹರ್ಷಿತಾ ಗಂಭೀರ ಗಾಯಗೊಂಡು ಆಸ್ಪತ್ರೆಯ ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಸಿರೋಡಿನಿಂದ ಬೆಂಜನಪದವು ರಸ್ತೆಯ ಮೂಲಕ ಕಡೆಗೋಳಿ ಮನೆಗೆ ಹೋಗುತ್ತಿದ್ದ ವೇಳೆ ಬೆಂಜನಪದವು ಎಂಬಲ್ಲಿ ಎದುರಿನಿಂದ ಬಂದ ಶಿಪ್ಟ್ ಕಾರು ಡಿಕ್ಕಿ ಹೊಡೆದಿದೆ.
ಘಟನೆ ಯಿಂದ ದ್ವಿಚಕ್ರ ವಾಹನ ಸವಾರೆ ಹಾಗೂ ಹಿಂಬದಿ ಪ್ರಯಾಣಿಕೆ ಇಬ್ಬರು ಕೂಡಾ ಗಂಭೀರ ಗಾಯಗೊಂಡಿದ್ದ ರು.
ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಕೂಡಾ ಹಿಂಬದಿಯ ಸವಾರೆ ಶ್ಯಾಮಲಾ ಚಿಕಿತ್ಸೆ ಫಲಕಾರಿ ಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ಶ್ಯಾಮಲಾ ಹಾಗೂ ಹರ್ಷಿತಾ ಇಬ್ಬರು ಕೂಡ ಕ್ಷೇತ್ರ ಸಂಪನ್ಮೂಲ ಕಚೇರಿ ಬಿಸಿರೋಡುವಿನಲ್ಲಿ ಕೆಲಸ ಮುಗಿಸಿ ವಾಪಾಸು ಮನೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಠಾಣಾ ಎಸ್. ಐ.ರಾಜೇಶ್, ಎ.ಎಸ್.ಐ.ಬಾಲಕೃಷ್ಣ , ಸಿಬ್ಬಂದಿ ಮನೋಹರ ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...