Tuesday, July 15, 2025

ರಿಕ್ಷಾ ಪಲ್ಟಿ: ನಾಲ್ವರು ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗಾಯ

ಬಂಟ್ವಾಳ: ಎಸೆಸೆಲ್ಸಿ ಪರೀಕ್ಷೆಗೆ ಮಕ್ಕಳನ್ನು ಸಾಗಿಸುತ್ತಿದ್ದ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಪಾಣೆಮಂಗಳೂರು ಸಮೀಪದ ಶಂಭೂರಿನಲ್ಲಿ ಸೋಮವಾರ ನಡೆದಿದೆ. ಶಂಭೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಾಯಗೊಂಡವರಾಗಿದ್ದು, ಈ ಪೈಕಿ ವಿದ್ಯಾರ್ಥಿ ಅಕ್ಷಿತ್ ಗೆ ತೀವ್ರ ತರದ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು ಮೂವರು ವಿದ್ಯಾರ್ಥಿನಿಯರಿಗೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. ಶಂಭೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಶಂಭೂರು ಬಳಿಯ ಚರ್ಚ್ ಸಮೀಪ ನಾಯಿಯೊಂದು ರಿಕ್ಷಾಕ್ಕೆ ಅಡ್ಡ ಬಂದ ಪರಿಣಾಮ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಕ್ಷಾ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

More from the blog

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...