Friday, June 27, 2025

ನೇರಳಕಟ್ಟೆ : ಬೈಕ್ ಡಿಕ್ಕಿ ಪಾದಚಾರಿ ಮೃತ್ಯು

ವಿಟ್ಲ:- ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ಪಾದಚಾರಿ ಯೋರ್ವರಿಗೆ ಸೋಮವಾರ ಬೆಳಿಗ್ಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ. ಮೃತರನ್ನು ನೇರಳಕಟ್ಟೆ ಸಮೀಪದ ಪರ್ಲೋಟು ನಿವಾಸಿ ಬೀಡಿ ಗುತ್ತಿಗೆದಾರ ಖಾಸೀಂ (68 ) ಗುರುತಿಸಲಾಗಿದೆ. ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಸಂಚರಿಸುತ್ತದ್ದ ಬೈಕೊಂದು ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ನೇರಳಕಟ್ಟೆ ಬಸ್ಸು ನಿಲ್ದಾಣ ಎದುರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಸಿಂ ಎಂಬವರಿಗೆ ಸೋಮವಾರ ಬೆಳಿಗ್ಗೆ ಡಿಕ್ಕಿಹೊಡೆದಿತ್ತು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...