Saturday, January 31, 2026

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಚಿಕ್ಕಮಗಳೂರು: ರಸ್ತೆಯಲ್ಲಿ ತೀವ್ರ ಮಂಜು ಕವಿದಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಕಾರಿನಲ್ಲಿದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಯಲ್ಲಿ ಭಾರೀ ಮಂಜು ಕವಿದಿದ್ದ ಕಾರಣ ಚಾರ್ಮಾಡಿ ಘಾಟಿಯ ಸೋಮನಕಾಡು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಜಲಪಾತದತ್ತ ಮುನ್ನುಗ್ಗಿ ಮಡಚಿ ಬಿದ್ದಿದೆ.


ದಾವಣಗೆರೆ ಮೂಲದ ಸ್ವಿಫ್ಟ್ ಕಾರಿನಲ್ಲಿ ಐವರು ಚಾರ್ಮಾಡಿ ಘಾಟ್ ಮುಖಾಂತರ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಐವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯಾದಿಂದ ಪಾರಾಗಿದ್ದಾರೆ. ಜಲಪಾತದ ಬಳಿ ಮಗುಚಿ ಬಿದ್ದ ಕಾರನ್ನು ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಿಟಾಚಿ ಮೂಲಕ ಮೇಲೆತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...