Friday, January 30, 2026

ಬೈಕ್ ಮತ್ತು ರಿಕ್ಷಾ ಮಧ್ಯೆ ಅಪಘಾತದಲ್ಲಿ ಗಾಯಗೊಂಡಿದ್ದ ದ್ವಿ ಚಕ್ರ ವಾಹನ ಸವಾರ ಸಾವು

ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದೆ.
ಮೆಲ್ಕಾರ್ ನಿವಾಸಿ ತಾರಾನಾಥ (35) ಮೃತಪಟ್ಟ ವ್ಯಕ್ತಿ.
ಬುಧವಾರ ಸಂಜೆ ವೇಳೆ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿಯಿಂದ ಕಲ್ಲಡ್ಕ ಪೇಟೆಗೆ ತಾರಾನಾಥ ಅವರು ದ್ವಿಚಕ್ರವಾಹನದಲ್ಲಿ ಬರುವ ವೇಳೆ ಎದುರಿನಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಬೈಕ್ ಸವಾರ ತಾರಾನಾಥ ಅವರ ಹೊಟ್ಟೆಯ ಭಾಗಕ್ಕೆ ಗಾಯವಾಗಿದ್ದು ಕೂಡಲೇ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ರಾತ್ರಿ ವೇಳೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ. ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...