Wednesday, February 4, 2026

ಕಾರು ಅಪಘಾತದಲ್ಲಿ ತುಳು ಚಿತ್ರ ನಿರ್ದೇಶಕ ಹ್ಯಾರಿಸ್ ಸಾವು

ತುಳು ಚಿತ್ರರಂಗದ ಯುವ ನಿರ್ದೇಶಕ ಹ್ಯಾರಿಸ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೂಡಬಿದ್ರೆ ಸಮೀಪ ಕಳೆದ ತಡರಾತ್ರಿ ಈ ಘಟನೆ ನಡೆದಿದ್ದು, 30 ವರ್ಷದ ಸಿನಿಮಾ ನಿರ್ದೇಶಕ ಹ್ಯಾರಿಸ್ ನಿಧನರಾಗಿದ್ದಾರೆ.

ಹ್ಯಾರಿಸ್ ಹೌದಾಲ್ ತಮ್ಮ ಓಮಿನಿ ಕಾರಿನಲ್ಲಿ ಕಳೆದ ತಡರಾತ್ರಿ ಮೂಡಬಿದ್ರೆಯಿಂದ ಶಿರ್ತಾಡಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ನಿದ್ದೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹ್ಯಾರಿಸ್ ಹೌದಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಹ್ಯಾರಿಸ್ ನಿರ್ದೇಶನದ ‘ಆಟಿಡೊಂಜಿ ದಿನ’ ತುಳು ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಕಳೆದ ಮೂರು ದಿನಗಳಿಂದ ಸರಿಯಾಗಿ ನಿದ್ದೆ ಇರಲಿಲ್ಲ ಎನ್ನಲಾಗಿದೆ.

ಹೀಗಿದ್ದರೂ ತಡರಾತ್ರಿ ಕಾರು ಚಲಾಯಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಕುರಿತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...