Saturday, January 31, 2026

ಬೊಲೆರೋ – ಬೈಕ್ ಢಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಟ್ಲ: ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.8ರಂದು ವಿಟ್ಲ ಸಮೀಪದ ಕಾಶಿಮಠದಲ್ಲಿ ಸಂಭವಿಸಿದೆ.

ಮೃತ ಬೈಕ್ ಸವಾರನನ್ನು ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ(55) ಎಂದು ಗುರುತಿಸಲಾಗಿದೆ.  ಬೈಕ್ ಹಾಗೂ ಬೊಲೆರೋ ವಾಹನ ವಿಟ್ಲ ಭಾಗದಿಂದ ಉಕ್ಕುಡ ಭಾಗಕ್ಕೆ ತೆರಳುತ್ತಿದ್ದಾಗ ಕಾಶಿಮಠ ಸಮೀಪ ಬೊಲೆರೋ ವಾಹನ‌ ಬೈಕ್ ಹಿಂಭಾಗಕ್ಕೆ ಢಿಕ್ಕಿಯಾಗಿದೆ.

ಘಟನೆಯಿಂದಾಗಿ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾಧಿಕಾರಿ ವಿನೋದ್ ರೆಡ್ಡಿ ಅವರ ನೇತೃತ್ವದ ಪೊಲೀಸರ ತಂಡ ತೆರಳಿ ಮಾಹಿತಿ ಸಂಗ್ರಹಿಸಿದೆ.

ಮೃತದೇಹವನ್ನು ವಿಟ್ಲ ಸರಕಾರ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಬೊಲೆರೋ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...