Friday, January 30, 2026

ಸ್ಕೂಟರ್‌ಗಳ ನಡುವೆ ಅಪಘಾತ: ಮೂವರು ಗಂಭಿರ

ಬಂಟ್ವಾಳ: ತಾಲೂಕಿನ ವಿಟ್ಲ ಸಾಲೆತ್ತೂರು ರಸ್ತೆಯ ಚರ್ಚ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಆಕ್ಟೀವಾ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ನೀರಾಕಣಿ ನಿವಾಸಿಗಳಾದ ಸಮದ್ ಮತ್ತು ಅಫ್ನಾಝ್ ಎಂಬವರು ಹಾಗೂ ಮತ್ತೊಂದು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಚಂದಳಿಕೆ ನಿವಾಸಿ ದೂಮಣ್ಣ ಗೌಡ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಇವರ ಪೈಕಿ ಅಫ್ನಾಝ್‌ನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ನಿನ್ನೆ ಸಂಜೆ ವೇಳೆ ಸಮದ್ ಜತೆ ಅಫ್ನಾಜ್ ವಿಟ್ಲ ಪೇಟೆಗೆ ಬಂದು ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅಫ್ನಾಝ್‌ನನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...