Thursday, January 29, 2026

ಪಾಣೆಮಂಗಳೂರಿನಲ್ಲಿ ಭೀಕರ ಅಪಘಾತ

ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರ್ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಪಾಣೆಮಂಗಳೂರಿನ ಹಳೆಟೋಲ್ ಗೇಟ್ ಸಮೀಪ ಇದೀಗ ಸಂಭವಿಸಿದೆ.


ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದವರಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕಾರಿನಲ್ಲಿದ್ದವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಪೊಲೀಸರು ದಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಸಮಯ ಟ್ರಾಫಿಕ್ ಉಂಟಾಗಿತ್ತು.

More from the blog

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...