Tuesday, July 15, 2025

ಹೈದರಾಬಾದ್ ನಲ್ಲಿ ಅಪಘಾತ : ಬಂಟ್ವಾಳದ ಯುವಕ ಸಾವು

ಬಂಟ್ವಾಳ: ಹೈದರಾಬಾದ್ ನಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ತಾಲೂಕಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಯುವಕನೋರ್ವ ಸಾವನ್ನಪ್ಪಿದ್ದಾನೆ. ಮೃತರನ್ನು ಇಲ್ಲಿನ ಕುಚ್ಚುಗುಡ್ಡೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಪ್ರಶಾಂತ್ ಶೆಟ್ಟಿ(32) ಎಂದು ಗುರುತಿಸಲಾಗಿದೆ.

ಪ್ರಶಾಂತ್ ಶೆಟ್ಟಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿ‌ಯಾಗಿ ಈ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತಾಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...