Saturday, July 12, 2025

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಸಾವು

ವಿಟ್ಲ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ.

ನಿಡ್ಪಳ್ಳಿ ಗ್ರಾಮದ ವಾಲ್ತಾಜೆ‌ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ ದುರ್ದೈವಿ.

ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು ತರುತ್ತಿದ್ದವೇಳೆ ಮಿತ್ತೂರು ಮಸೀದಿ ಸಮೀಪದದ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸಹಿತ ಸುರೇಶ್ ರವರು ಬಿದ್ದಿರುವುದನ್ನು ನೋಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುರೇಶ್ ರವರನ್ನು ಕೂಡಲೇ ಆ ದಾರಿಯಾಗಿ‌ ಬಂದ‌ ವಾಹನದ‌ ಮೂಲಕ ಮಂಗಳೂರಿನ ಆಸ್ಪತ್ರೆಗೆ‌ ಸಾಗಿಸಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ‌ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಮಾಹಿತಿ‌ ಸಂಗ್ರಹಿಸಿದೆ. ಆಪಘಾತ ನಡೆದ ವೇಳೆ ಯಾರೂ ನೋಡದಿರುವ ಹಿನ್ನೆಲೆಯಲ್ಲಿ ಘಟನೆ ಹೇಗೆ ನಡೆದಿದೆ ಎನ್ನುವ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...