Friday, July 11, 2025

ಮೆಲ್ಕಾರ್ : ಬೈಕ್ ಗೆ ಲಾರಿ ಡಿಕ್ಕಿ – ಸವಾರ ಸಾವು

ಬಂಟ್ವಾಳ: ರಾ.ಹೆ.75ರ ಮೆಲ್ಕಾರ್ ಜಂಕ್ಷನ್ ನಲ್ಲಿ ನ.16ರ ತಡರಾತ್ರಿ ಲಾರಿ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮಂಗಳೂರು ನಿವಾಸಿ ಗಣೇಶ್(36) ಮೃತ ದುರ್ದೈವಿ. ಅವರು ಮೆಲ್ಕಾರ್ ಜಂಕ್ಷನ್‌ ನಲ್ಲಿ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದ ವೇಳೆಗೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ.

ಗಣೇಶ್ ಅವರು ಮೆಲ್ಕಾರ್ ಸಮೀಪದ ಮಾರ್ನಬೈಲು ಸರ್ವೀಸ್ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಯ ಸಂದರ್ಭದಲ್ಲಿ ಲಾರಿ ಚಾಲಕ ಅಪಘಾತದಲ್ಲಿ ತಪ್ಪಿಸಲು ಪ್ರಯತ್ನಿಸಿದ ವೇಳೆ ಮೆಲ್ಕಾರ್ ನಲ್ಲಿದ್ದ ಸರ್ಕಲ್ ಹುಡಿಯಾಗಿದೆ.

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...