Tuesday, January 27, 2026

ಬೈಕ್ ಸವಾರನಿಂದ ಯುವಕನಿಗೆ ಚೂರಿ ಇರಿತ

ಮೂಡಬಿದ್ರಿ: ಬೈಕ್ ನಲ್ಲಿ ಅತೀ ವೇಗದಲ್ಲಿ ಸವಾರಿ ಮಾಡುತ್ತಿದ್ದ ಯುವಕನನ್ನು ತಡೆಯುವ ಸಂದರ್ಭ ಬೈಕ್ ಸವಾರ, ಸ್ಥಳೀಯ ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಪುಚ್ಚೆಮೊಗರು ಸಮೀಪ ತಾಕೊಡೆ ಕ್ರಾಸ್ ಬಳಿ ಮಂಗಳವಾರ ನಡೆದಿದೆ.
ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಕಡೆಯಿಂದ ಅತೀ ವೇಗದಲ್ಲಿ ಬೈಕ್ ಸವಾರಿ ಮಾಡಿಕೊಂಡು ಬರುತ್ತಿದ್ದ ಸವಾರ ಪುಚ್ಚೆಮೊಗರುವಿನಲ್ಲಿ ಪೊಲೀಸರು ಅಳವಡಿಸಿದ ಬ್ಯಾರಿ ಕೇಡ್ ಗೆ ಡಿಕ್ಕಿ ಹೊಡೆದಿದ್ದಾನೆ. ಅಲ್ಲಿಂದ ಮತ್ತೆ ಅತೀ ವೇಗವಾಗಿ ಬೈಕ್ ಸವಾರಿ ಮಾಡಿಕೊಂಡು ಬರುತ್ತಿರುವುದುದನ್ನು ನೋಡಿದ ಯುವಕರು ಆತನನ್ನು ಬೆನ್ನಟ್ಟಿ ತಡೆದಿದ್ದಾರೆ. ಈ ಸಂದರ್ಭದಲ್ಲಿ ಬೈಕ್ ಸವಾರ ಚೂರಿಯಿಂದ ಕರಿಂಜೆ ನಿವಾಸಿ ಶಿವ ಕುಮಾರ್ ಎಂಬಾತನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಗಾಯಗೊಂಡಿರುವ ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

More from the blog

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...

Bantwal : ಕೃಷಿ ಭೂಮಿ, ಕೊರಗ ಸಮುದಾಯ ಭವನಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ...

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...