Friday, June 27, 2025

ಬಸ್ತಿಕೋಡಿ: ಆಧಾರ್ ನೋಂದಣಿ ಮೇಳ

ಬಂಟ್ವಾಳ: ಬಂಟ್ವಾಳ ತಾ.ಚೆನ್ನೈತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಬಸ್ತಿಕೋಡಿ ತ್ರಿವೇಣಿ ಕಲಾವೃಂದ, ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ, ಬಸ್ತಿಕೋಡಿ ಶ್ರೀ ದುರ್ಗಾ ಸೈಬರ್ ಸೆಂಟರ್ ಸಿಎಸ್‌ಸಿ ಸೇವಾ ಕೇಂದ್ರ ಇದರ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಆಶ್ರಯದಲ್ಲಿ ಆಧಾರ್ ಮೇಳ, ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ನೋಂದಣಿ ಕಾರ್ಯಕ್ರಮ ಬಸ್ತಿಕೋಡಿಯಲ್ಲಿ ಫೆ.28 ರಂದು ಜರಗಿತು.
ಚೆನ್ನೈತ್ತೋಡಿ ಗ್ರಾ.ಪಂ. ಅಧ್ಯಕ್ಷ ಯತೀಶ್ ಶೆಟ್ಟಿ ವಿಜಯನಗರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆಧಾರ್ ಮೇಳಗಳು ಗ್ರಾಮೀಣ ಜನತೆಗೆ ಸುವರ್ಣಾವಕಾಶವಾಗಿದ್ದು, ಸಹಕಾರಿಯಾಗಿದೆ. ಪುತ್ತೂರು ಅಂಚೆ ಇಲಾಖೆ ಒದಗಿಸಿದ ಇಂತಹ ಶಿಬಿರಗಳ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ಅಂಚೆ ಇಲಾಖೆ ಪ್ರಧಾನ ಶಾಖೆ ಪುತ್ತೂರು ಇದರ ಅಽಕ್ಷಕ ಜಾರ್ಜ್ ರೊಡ್ರಿಗಸ್, ಗುತ್ತಿಗೆದಾರ ಅಮ್ಮು ರೈ ಹರ್ಕಾಡಿ, ಪದವು ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಗ್ರಾ.ಪಂ.ಸದಸ್ಯರಾದ ಆನಂದ ಆಚಾರ್ಯ, ದಯಾನಂದ ಕುಲಾಲ್, ಸಿಎಸ್‌ಸಿ ಕೇಂದ್ರದ ಪ್ರಕಾಶ್ ಗಟ್ಟಿ, ಉದ್ಯಮಿಗಳಾದ ಲಾದ್ರು ರೊಡ್ರಿಗಸ್, ರಫೀಕ್, ಅಂಚೆ ಇಲಾಖೆ ಸಿಬಂದಿಗಳು, ಮತ್ತಿತರರು ಉಪಸ್ಥಿತರಿದ್ದರು.
ಗ್ರಾ.ಪಂ.ಸದಸ್ಯ ಆನಂದ ಆಚಾರ್ಯ ಸ್ವಾಗತಿಸಿದರು. ತ್ರಿವೇಣಿ ಕಲಾವೃಂದ ಸಂಚಾಲಕ ಪ್ರವೀಣ್ ಗಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...