Wednesday, February 12, 2025

ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣದ ಆರೋಪಿಗಳ ಪತ್ತೆ ಹಚ್ಚಿದ ಪೋಲೀಸ್ ತಂಡ…..

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತಾ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಟ್ಲ – ಪುತ್ತೂರು ರಸ್ತೆಯ ಗುಪ್ತ ಸ್ಥಳವೊಂದರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಪೆರ್ಲದಲ್ಲಿ ವಾಹನದ ಗುರುತು ಹಾಗೂ ನಂಬರ್ ಪ್ಲೇಟ್ ಪತ್ತೆ ಮಾಡಲಾಗಿತ್ತಾದರೂ, ಅದರಿಂದ ಕಳ್ಳರ ಪತ್ತೆಯನ್ನು ಮಾಡಲು ಸಾಧ್ಯವಾಗಿರಲಿಲ್ಲ. ತಾಂತ್ರಿಕ ತನಿಖೆಯ ಮೂಲಕ ಕೃತ್ಯಕ್ಕೆ ಕಾರಣರಾದವರ ಮಾಹಿತಿಯನ್ನು ಸಂಗ್ರಹಿಸಿದ ಪೊಲೀಸರು ಪ್ರಮುಖ ಆರೋಪಿಗಳನ್ನು ಎರಡು ದಿನದ ಮೊದಲು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ನೀಡಿದ ಮಾಹಿತಿಯ ಪ್ರಕಾರ ಕೇರಳದಲ್ಲಿ ಬೀಡು ಬಿಟ್ಟಿರುವ ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ವಶಕ್ಕೆ ಪಡೆದ ವಿಚಾರ ಬಹಿರಂಗಗೊಳ್ಳಬಾರದೆಂಬ ಕಾರಣಕ್ಕೆ ವಿಟ್ಲ – ಪುತ್ತೂರು ರಸ್ತೆಯ ಗುಪ್ತ ಸ್ಥಳವೊಂದರಲ್ಲಿ ಇರಿಸಿ ಅಲ್ಲಿಗೆ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದೆ. ವಿಚಾರಣೆಯ ಸಂದರ್ಭದಲ್ಲಿ ನಗದು ಹಾಗೂ ಚಿನ್ನಾಭರಣವನ್ನು ಪಾಲು ಮಾಡಿಕೊಂಡು ಹಂಚಿಕೊಂಡ ಮಾಹಿತಿಯನ್ನು ನೀಡಿದ್ದಾರೆನ್ನಲಾಗಿದ್ದು, ವಶಕ್ಕೆ ಪಡೆದವರನ್ನು ಅಲ್ಲಿಗೆ ಖಾಸಗೀ ವಾಹನದ ಮೂಲಕ ಕರೆದುಕೊಂಡು ಹೋಗಿ ಅದನ್ನು ವಶಪಡಿಸಿಕೊಳ್ಳುವ ಕಾರ್ಯವನ್ನು ನಡೆಸಲಾಗುತ್ತಿದೆ ಎಂಬ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.

ಬ್ಯಾಂಕ್ ಕಟ್ಟಡದ ಹಿಂಭಾಗಿಲಿನ ಕಿಟಕಿಯನ್ನು ತುಂಡರಿಸಿ ಒಳ ನುಗ್ಗಿದ ಕಳ್ಳರು ಸೇಫ್ ಲಾಕರ್ ಬಾಗಿಲು ತುಂಡರಿ ಲಾಕರ್ ಒಳಗಿದ್ದ ನಗದು ಹಾಗೂ ಚಿನ್ನಾಭರಣವನ್ನು ಫೆ.೭ರ ರಾತ್ರಿ ದೋಚಿದ್ದರು. ಇದರ ಪ್ರಮಾಣದ ಬಗ್ಗೆ ಠಾಣೆಗೆ ದೂರಿನಲ್ಲಿ ಶಾಖಾ ಪ್ರಬಂಧಕರು ನಿಖರ ಮಾಹಿತಿಯನ್ನು ನೀಡಿರಲಿಲ್ಲ. ಬ್ಯಾಂಕ್ ಕಳ್ಳತನ ನಡೆಯುತ್ತಿದ್ದಂತೆ ವಾಹನದ ಗುರುತು ಪತ್ತೆ ಮಾಡಿ, ಸ್ಥಳೀಯ ಇಬ್ಬರನ್ನು ಅನುಮಾನದ ಮೇಲೆ ವಿಚಾರಣೆಯನ್ನು ನಡೆಸಿ ಬಿಡುಗಡೆ ಮಾಡಲಾಗಿತ್ತು.

More from the blog

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...