Wednesday, February 12, 2025

ಅಡ್ಯನಡ್ಕ ಬ್ಯಾಂಕ್ ಶಾಖೆಯಲ್ಲಿ ಕಳ್ಳತನ : ಇಬ್ಬರು ವಶಕ್ಕೆ

ವಿಟ್ಲ: ಕರ್ಣಾಟಕ ಬ್ಯಾಂಕ್‌ನ ಅಡ್ಯನಡ್ಕ ಶಾಖೆಯಲ್ಲಿ ನಡೆದ ಕೋಟ್ಯಂತರ ನಗ ನಗದು ಕಳ್ಳತನ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸ್ ಇಲಾಖೆಯ ವಿಶೇಷ ತಂಡ ತನಿಖೆ ಕೈಗೆತ್ತಿಕೊಂಡಿದ್ದು, ಬ್ಯಾಂಕ್‌ ಹಾಗೂ ಅಕ್ಕಪಕ್ಕ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದೆ. ಇದರ ಆಧಾರದಲ್ಲಿ ಕಳ್ಳತನಕ್ಕೆ ಆಗಮಿಸಿದ್ದ ವಾಹನದ ಸುಳಿವು ಸಿಕ್ಕಿದ್ದು, ಮತ್ತಷ್ಟು ವಾಹನ ನಿಖರತೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ದೃಶ್ಯಾವಳಿ ಕಳುಹಿಸಲಾಗಿದೆ.

ಭಾರೀ ಮೊತ್ತದ ಕಳವು ನಡೆದ ಬಳಿಕ ಬ್ಯಾಂಕ್ ನನ್ನು ಸಂಪೂರ್ಣವಾಗಿ ಭದ್ರತೆಗೊಳಿಸಲಾಗುತ್ತಿದ್ದು, ಕಿಟಕಿಯನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಹಳೆ ಕಪಾಟುಗಳನ್ನು ಹೊರ ಹಾಕಿ ನವೀಕರಿಸಲಾಗುತ್ತಿದೆ.

ಈಗ ಬ್ಯಾಂಕ್‌ನಲ್ಲಿ ಹೆಚ್ಚಿನ ಸುರಕ್ಷತಾ ಕ್ರಮ ಅಳವಡಿಸಲಾಗಿದ್ದು, ಸೋಮವಾರವೂ ಶಾಖೆ ಕಾರ್ಯ ನಿರ್ವಹಿಸುವುದು ಅನುಮಾನ ಎನ್ನಲಾಗಿದೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...