Monday, February 17, 2025

ಅಡ್ಯನಡ್ಕ ಜನತಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಫೆಬ್ರುವರಿ 17ರಂದು ತಾಯಂದಿರ ಮಹಾ ಸಮಾವೇಶ

ಬಂಟ್ವಾಳ ತಾಲೂಕಿನ ಅಡ್ಯನಡ್ಕ ಎಜುಕೇಶನಲ್ ಸೊಸೈಟಿ(ರಿ) ವತಿಯಿಂದ ತಾಯಂದಿರ ಮಹಾ ಸಮಾವೇಶ ಕಾರ್ಯಕ್ರಮವು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಫೆಬ್ರುವರಿ 17ರಂದು ನಡೆಯಲಿದೆ.

‘ಸುಂದರ ನಾಳೆಗೆ, ತಾಯಂದಿರ ಬೆಸುಗೆ’ ಹಾಗೂ ‘ಸಮೃದ್ಧ ಸುಶಿಕ್ಷಿತ ಕುಟುಂಬ ಬಂಧಕ್ಕೆ ದಿವ್ಯ ಸುಗಂಧ’ ಸಮಾವೇಶದ ಘೋಷವಾಕ್ಯವಾಗಿದ್ದು . ಸಮಾವೇಶದಲ್ಲಿ ‘ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಸಹಯೋಗ’ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಲಿದೆ. ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ಅಡ್ಯನಡ್ಕ ಇದರ ಅಧ್ಯಕ್ಷ ಗೋವಿಂದ ಪ್ರಕಾಶ ಸಾಯ ಸಮಾವೇಶ ಉದ್ಘಾಟಿಸುವರು.

ಎಣ್ಮಕಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಆಯಿಷಾ ಎ. ಎ. ಪೆರ್ಲ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರಿನ ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘ ಇದರ ಅಧ್ಯಕ್ಷರಾದ ಸುಮಾ ಅರುಣ್ ಮಾನ್ವಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಸಮಾರೋಪ ಭಾಷಣ ಮಾಡಲಿರುವರು ಎಂದು ಅಡ್ಯನಡ್ಕ ಎಂಜುಕೇಶನ್ ಸೊಸೈಟಿ ಆಡಳಿತಾಧಿಕಾರಿ ರಮೇಶ ಎಂ ಬಾಯಾರು ತಿಳಿಸಿರುತಾರೆ

More from the blog

ಬಲ್ಲು ಕೊರಗ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯ ಹಾಗೂ ಜೇನು‌ಕುರುಬರ ಸಮಗ್ರ ಅಭಿವೃದ್ಧಿಗೆ ಪ್ರಧಾನಮಂತ್ರಿ ಜನ್ ಮನ್ ಯೋಜನೆಯ ಮೂಲಕ 20 ಕೋಟಿ ರೂ ಮಂಜೂರಾಗಿದೆ, ಸಮಾಜದ ಎಲ್ಲಾ ವರ್ಗದವರನ್ನು ಮುಖ್ಯವಾಹಿನಿಗೆ ತರುವುದು...

ಬಂಟ್ವಾಳದಲ್ಲಿ ಸಂತ ಶ್ರೀ ಸೇವಾಲಾಲ ಜಯಂತಿ ಆಚರಣೆ

ಬಂಟ್ವಾಳ : ಭರತ ಖಂಡದ ಧಾರ್ಮಿಕ ರಾಯಾಭಾರಿ ಎಂದೇ ಹೆಸರಾಗಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನಗೆದ್ದವರು. ಸಂತ ಶ್ರೀ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯದ ಆರಾಧ್ಯ ದೈವ...

ಚರಂಡಿಗೆ ಬಿದ್ದ ರಿಕ್ಷಾ : ಚಾಲಕ ಸಾವು, ಮಕ್ಕಳಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಪ್ರಯಾಣಿಕ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮುಂಜೆ...

ಕೆ.ಎನ್.ಆರ್.ಸಿ.ಕಂಪೆನಿ ಅಧಿಕಾರಿಗಳ ವಿರುದ್ದ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು..

ಬಂಟ್ವಾಳ: ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮಣ್ಣು ಅಗೆದು ನಷ್ಟ ಮಾಡಿದ್ದಾರೆ ಎಂದು ಖಾಸಗಿ ಕಂಪೆನಿ ಮೇಲೆ ಬಂಟ್ವಾಳ ‌ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‌ರಾಷ್ಟ್ರೀಯ ಹೆದ್ದಾರಿ ಬಿಸಿರೋಡು- ಅಡ್ಡಹೊಳೆ ಚತುಷ್ಪತ...