ಬಂಟ್ವಾಳ: ರಾಜ್ಯ ಸರಕಾರದಿಂದ ನಡೆಸಲ್ಪಡುವ ದ.ಕ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿಗೆ ದಾಖಲಾತಿಗಾಗಿ ಪ್ರವೇಶ ಪರೀಕ್ಷೆ ಬರೆಯಲು ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ಎ.3ರವರೆಗೆ ಅವಕಾಶವಿದೆ.
ಅಭ್ಯರ್ಥಿಗಳಿಗೆ ಮೇ. 6ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ. ಆನ್‌ಲೈನ್ ಅರ್ಜಿಯನ್ನು ಸಮೀಪದ ಮೊರಾರ್ಜಿ ವಸತಿ ಶಾಲೆಯಲ್ಲಿ ಹಾಕಲು ಅವಕಾಶವಿದೆ.ಆಯ್ಕೆಯಾದ ಅಭ್ಯರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲಿ 6 ರಿಂದ 10ನೇ ತರಗತಿಯವರೆಗೆ ವಸತಿ ಸಹಿತ ಉಚಿತ ಶಿಕ್ಷಣ ದೊರಕಲಿದೆ. ಹೆಚ್ಚಿನ ಮಾಹಿತಿಗಾಗಿ ವಗ್ಗ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರನ್ನು (9008135090)ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.














