Wednesday, February 12, 2025

ಅಡ್ಯನಡ್ಕ: ’ಆರಾಧನೆ’ ಕವನ ಸಂಕಲನ ಬಿಡುಗಡೆ

ಅಡ್ಯನಡ್ಕ: ಅಡ್ಯನಡ್ಕ ಎಜುಕೇಷನಲ್ ಸೊಸೈಟಿ ಪ್ರಕಟಿಸಿರುವ ಜನತಾ ಪ್ರೌಢಶಾಲೆಯ ವಿದ್ಯಾರ್ಥಿನಿ ಪಂಚಮಿ ಕುಮಾರಿ ಬಾಕಿಲಪದವು ಬರೆದಿರುವ ’ಆರಾಧನೆ’ ಕವನ ಸಂಕಲನದ ಬಿಡುಗಡೆ ಕಾರ್‍ಯಕ್ರಮ ಜ.೨೬ ರಂದು ವಿದ್ಯಾಸಂಸ್ಥೆಯ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ, ಪತ್ರಕರ್ತ ಶಂಕರ್ ಸಾರಡ್ಕ ಕೃತಿ ಬಿಡುಗಡೆ ನೆರವೇರಿಸಿ ಮಾತನಾಡಿ, ಕವಿತೆಯ ಮೂಲಕ ಜರಗುವ ಅಭಿವ್ಯಕ್ತಿ ಭಾವನೆಗಳನ್ನು ಪ್ರಕಟಗೊಳಿಸುತ್ತದೆ. ಎಳವೆಯಲ್ಲಿ ಪುಸ್ತಕ ಓದುವ ಅಭಿರುಚಿ ಮಕ್ಕಳಿಗೆ ಬರವಣಿಗೆಯ ಶೈಲಿ, ವೈಖರಿಯನ್ನು ಕಲಿಸುತ್ತದೆ. ವಿಶಿಷ್ಟವಾಗಿ ಗುರುತಿಸಿಕೊಳ್ಳುವ ಬಯಕೆ ಸಾಧನೆಗಳಿಗೆ ಕಾರಣವಾಗುತ್ತದೆ ಎಂದು ನುಡಿದರು.
ಕೃತಿಯ ಪ್ರಕಾಶಕರಾದ ಜನತಾ ವಿದ್ಯಾಸಂಸ್ಥೆಗಳ ಸಂಚಾಲಕಿ ಡಾ. ಅಶ್ವಿನಿ ಕೃಷ್ಣಮೂರ್ತಿ ವಾರಣಾಶಿ, ಅಡ್ಯನಡ್ಕ ಎಜುಕೇಷನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು, ಸಾಹಿತಿ ಮತ್ತು ಸಂಘಟಕ ಭಾಸ್ಕರ ಅಡ್ವಳ, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಶ್ರೀನಿವಾಸ್, ಲೇಖಕಿ ಪಂಚಮಿಕುಮಾರಿ ಮಾತನಾಡಿದರು. ಅಡ್ಯನಡ್ಕ ಎಜುಕೇಷನಲ್ ಸೊಸೈಟಿಯ ಅಧ್ಯಕ್ಷ ಗೋವಿಂದ ಪ್ರಕಾಶ್ ಸಾಯ ಅಧ್ಯಕ್ಷತೆ ವಹಿಸಿದ್ದರು. ಪೋಷಕರಾದ ವೆಂಕಟ್ರಮಣ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ಸ್ವಾಗತಿಸಿ, ಹಿರಿಯ ಶಿಕ್ಷಕ ಎಸ್. ರಾಜಗೋಪಾಲ ಜೋಶಿ ವಂದಿಸಿದರು. ಕನ್ನಡ ಅಧ್ಯಾಪಕ ಶಿವಕುಮಾರ ಸಾಯ ಕಾರ್‍ಯಕ್ರಮ ನಿರೂಪಿಸಿದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...