Friday, June 27, 2025

’ಭಜನೆ ಮತ್ತು ಭಜನಾ ಮಂದಿರಗಳು ಭಾರತೀಯ ಸಂಸ್ಕೃತಿಯ ಜೀವಾಳ’

ಅಡ್ಯನಡ್ಕ: ಭಜನೆ ಎಂಬುದು ಭಕ್ತ ಮತ್ತು ಭಗವಂತನ ಸೇತುವೆಯಾಗಿದೆ ನಮಗೆ ಜೀವನ ಮಾರ್ಗವನ್ನು ತೋರಿಸಿಕೊಡುವ ಭಜನೆ ಹಾಗೂ ಭಜನಾ ಮಂದಿರಗಳು ಭಾರತೀಯ ಸಂಸ್ಕೃತಿ ಜೀವಾಳಗಳು ಎಂದು ಅಡ್ಯನಡ್ಕ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ವಿಶ್ವೇಶ್ವರ ವಿ.ಕೆ ಹೇಳಿದರು.
ಅವರು ಅಮೈ ಶ್ರೀ ಉಳ್ಳಾಲ್ತಿ ಭಜನಾ ಮಂಡಳಿಯ ೪೮ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸವನ್ನು ನೀಡಿದ ಭಜರಂಗದಳ ಪ್ರಾಂತ ಸಂಚಾಲಕರಾದ ಮುರಳೀಕೃಷ್ಣ ಹಸಂತ್ತಡ್ಕ ಇವರು ಮಾತನಾಡಿ ಬದಲಾಗುತ್ತಿರುವ ದೇಶದಲ್ಲಿ ನಾವೆಲ್ಲರೂ ನಮ್ಮದೇ ಆದ ಕೊಡುಗೆಯನ್ನು ನೀಡುವ ಮೂಲಕ ದೇಶದ ಅಭಿವೃದ್ಧಿಯ ಭಾಗವಾಗಬೇಕಿದೆ ಎಂದು ಹೇಳಿದರು.
ಗ್ಯಾರೇಜ್ ಮಾಲಕರ ಸಂಘ(ರಿ) ವಿಟ್ಲ ವಲಯ ಇದರ ಅಧ್ಯಕ್ಷರಾದ ಲಕ್ಷ್ಮಣ ಪೂಜಾರಿ ಆರ್.ಎಸ್ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು, ವೇದಿಕೆಯಲ್ಲಿ ಮಂಡಳಿಯ ಅಧ್ಯಕ್ಷರಾದ ನಾರಾಯಣ ಕುಲಾಲ್ ಎ. ಉಪಸ್ಥಿತರಿದ್ದರು.
ಕು.ಮಾನ್ವಿ, ಕು.ಮೇಘ, ಶ್ರೀಲೇಖಾ ಪ್ರಾರ್ಥಿಸಿದರು. ಮಂಡಳಿಯ ಅಧ್ಯಕ್ಷರಾದ ನಾರಾಯಣ ಕುಲಾಲ್ ಸ್ವಾಗತಿಸಿದರು, ಕಾರ್ಯದರ್ಶಿ ಕೇಶವ ಕೋಪ್ರೆ ವರದಿ ವಾಚಿಸಿದರು, ಕೋಶಾಧಿಕಾರಿ ರಾಮ ಜಿ ವಂದಿಸಿದರು. ಶಿವಪ್ಪ ನಾಯ್ಕ ಶಾಂತಿಮೂಲೆ ಕಾರ್ಯಕ್ರಮ ನಿರೂಪಿಸಿದರು.
ವಾರ್ಷಿಕೋತ್ಸವ ಪ್ರಯುಕ್ತ ಬೆಳಗ್ಗೆ ದೀಪ ಪ್ರತಿಷ್ಠೆ, ಗಣಪತಿ ಹವನ, ಶ್ರೀ ದುರ್ಗಾ ಪೂಜೆ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ, ವೇದಮೂರ್ತಿ ಶ್ರೀ ಕೃಷ್ಣ ಪ್ರಸಾದ್ ಭಟ್ ಅಮೈ ಅವರ ಮುಂದಾಳತ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸ್ಥಳೀಯ ಶಾಲಾ ಹಾಗೂ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮಹಾಮಂಗಳಾರತಿ, ಅನ್ನಸಂತರ್ಪಣೆ ನಡೆದು ಗಿರೀಶ್ ರೈ ಕಕ್ಕೆಪದವು ಹಾಗೂ ಕಾವ್ಯಶ್ರೀ ಆಜೇರು ಇವರಿಂದ ಮನ ಸೂರೆಗೊಳ್ಳುವ ಗಾನ ವೈಭವ ಕಾರ್ಯಕ್ರಮ ನಡೆಯಿತು.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...