Wednesday, July 9, 2025

ಅಡ್ಯನಡ್ಕ: ಆನಿಮೇಶನ್ ಕಲಿಕಾ ತರಬೇತಿ

ಅಡ್ಯನಡ್ಕ: ಕಾರ್ಟೂನ್ ರಚನೆಯು ಅತ್ಯಂತ ಸುಲಭವಾಗಿ ಮತ್ತು ಆಸಕ್ತಿದಾಯಕವಾಗಿ ಕಲಿಯಬಲ್ಲ ಚಿತ್ರ ರಚನಾ ಪದ್ಧತಿಯಾಗಿದೆ. ಇಂದು ಕಾರ್ಟೂನ್ ಮತ್ತು ಆನಿಮೇಶನ್ ಕ್ಷೇತ್ರದಲ್ಲಿ ಸೃಜನಶೀಲ ಕಲಾವಿದರಿಗೆ ಹೆಚ್ಚಿನ ಬೇಡಿಕೆಯಿದೆ ಎಂದು ವ್ಯಂಗ್ಯಚಿತ್ರ ಕಲಾವಿದ ಮತ್ತು ಆನಿಮೇಟರ್ ಜಯರಾಮ ನಾವಡ ನಿಟಿಲಾಪುರ ಅವರು ಹೇಳಿದರು.
ಸಾಹಿತ್ಯ ಸಂಘ ಜನತಾ ಪ್ರೌಢಶಾಲೆ ಅಡ್ಯನಡ್ಕ ಮತ್ತು ’ಅಮೃತವಾಹಿನಿ’ ಸಹಯೋಗದಲ್ಲಿ ಜೂ.೨೯ರಂದು ಅಡ್ಯನಡ್ಕ ಜನತಾ ಪ್ರೌಢಶಾಲೆಯ ವಾರಣಾಶಿ ಕೃಷ್ಣ ಸಭಾಂಗಣದಲ್ಲಿ ನಡೆದ ಚಿತ್ರಕಲೆ ಮಾಹಿತಿ ಮತ್ತು ತರಬೇತಿ ಕಾರ್‍ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳಿಗೆ ಆನಿಮೇಶನ್ ಮತ್ತು ಕಾರ್ಟೂನ್ ರಚನೆಯ ತರಬೇತಿ ನೀಡಿದರು.
ಮತ್ತೋರ್ವ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಚಿತ್ರಕಲಾವಿದ, ವಿನ್ಯಾಸಕಾರ ನವೀನ್ ಜಿ. ಪುತ್ತೂರು ಅವರು ವಿದ್ಯಾರ್ಥಿಗಳಿಗೆ ನಾನಾ ಪ್ರಕಾರದ ಚಿತ್ರಕಲೆಯ ಮಾದರಿಗಳನ್ನು ಪರಿಚಯಿಸಿ ಮಾಹಿತಿ ನೀಡಿದರು.
ಸಾಹಿತ್ಯ ಸಂಘದ ಗೌರವಾಧ್ಯಕ್ಷ, ಮುಖ್ಯ ಶಿಕ್ಷಕ ಟಿ. ಆರ್. ನಾಯ್ಕ್ ಕಾರ್‍ಯಕ್ರಮವನ್ನು ಉದ್ಘಾಟಿಸಿದರು. ಕನ್ನಡ ಅಧ್ಯಾಪಕ ಶಿವಕುಮಾರ ಸಾಯ ಅವರು ಪ್ರಸ್ತಾವಿಸಿ, ಪರಿಚಯಿಸಿದರು. ಸಂಪನ್ಮೂಲ ವ್ಯಕ್ತಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಾಹಿತ್ಯ ಸಂಘದ ಅಧ್ಯಕ್ಷೆ ಮಧುರಾ ಬಿ. ಸ್ವಾಗತಿಸಿದರು. ಕಾರ್‍ಯದರ್ಶಿ ಕೃತಿಕಾ ಎಂ. ಎಸ್. ವಂದಿಸಿದರು. ಉಪಾಧ್ಯಕ್ಷೆ ನಾಗವೇಣಿ ಎ. ಕಾರ್‍ಯಕ್ರಮ ನಿರೂಪಿಸಿದರು.

 

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...