Thursday, February 13, 2025

ಅಡ್ಯನಡ್ಕ: ರಾಷ್ಟ್ರೀಯ ಮತದಾರರ ದಿನಾಚರಣೆ

ಅಡ್ಯನಡ್ಕ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲ ಡಿ. ಶ್ರೀನಿವಾಸ್ ಅವರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕ ಅಶೋಕ್ ಎಂ. ಅವರು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಮಾಹಿತಿ ನೀಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಗಳು ಹಾಗೂ ಮತದಾನವು ಮಹತ್ವದ್ದೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಎಲ್ಲರಿಗೂ ಮತದಾನ ಯಶಸ್ವಿಗೊಳಿಸುವ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...