ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯ ವಿದ್ಯಾರ್ಥಿನಿ ಪಂಚಮಿಕುಮಾರಿ ಬಾಕಿಲಪದವು ಬರೆದಿರುವ ‘ಆರಾಧನೆ’ ಕವನ ಸಂಕಲನದ ಬಿಡುಗಡೆ ಕಾರ್ಯಕ್ರಮವು ಜ.26ರಂದು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಲಿದೆ.

ಕೃತಿ ಬಿಡುಗಡೆಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ಮತ್ತು ಪತ್ರಕರ್ತ ಶಂಕರ್ ಸಾರಡ್ಕ ನೆರವೇರಿಸುವರು. ಅಡ್ಯನಡ್ಕ ಎಜುಕೇಷನಲ್ ಸೊಸೈಟಿ ಅಧ್ಯಕ್ಷ ಗೋವಿಂದ ಪ್ರಕಾಶ್ ಸಾಯ ಅಧ್ಯಕ್ಷತೆ ವಹಿಸಲಿದ್ದು, ಭಾರತೀಯ ಸಮಾಜ ಜೀವನ ಮತ್ತು ಶಿಕ್ಷಣ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ಮತ್ತು ಸಂಘಟಕ ಭಾಸ್ಕರ ಅಡ್ವಳ, ಪ್ರಕಾಶಕರಾದ ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸಂಚಾಲಕಿ ಡಾ ಅಶ್ವಿನಿ ಕೃಷ್ಣಮೂರ್ತಿ ವಾರಣಾಶಿ ಹಾಗೂ ಅಡ್ಯನಡ್ಕ ಎಜುಕೇಷನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ್ ಎಂ ಬಾಯಾರ್ ಉಪಸ್ಥಿತರಿರುವರು.