Friday, January 30, 2026

ಮಂಗಳೂರು: ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯನ ಬರ್ಬರ ಹತ್ಯೆ

ಮಂಗಳೂರು: ಅಡ್ಯಾರ್ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ನಿನ್ನೆ  ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ.

ನಿನ್ನೆ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ಇನ್ನು ಕೊಲೆಗೆ ವೈಯಕ್ತಿಕ ಹಾಗೂ ರಾಜಕೀಯ ಕಾರಣ ಎಂದು ಹೇಳಲಾಗುತ್ತಿದೆ.

ಈ ಕುರಿತಾಗಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

More from the blog

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...