Thursday, February 13, 2025

ಅಹವಾಲು ಸ್ವೀಕಾರ ಸಭೆ

ಬಂಟ್ವಾಳ: ಮಂಗಳೂರು – ವಿಲ್ಲಂಪುರ ರಾಷ್ರೀಯ ಹೆದ್ದಾರಿಯ ಬಿ.ಸಿ.ರೋಡಿನಿಂದ ಪುಂಜಾಲಕಟ್ಟೆ ಯವರೆಗೆ ರಸ್ತೆ ಅಗಲೀಕರಣದ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿ ಗೆ ಅಡಚಣೆಯಾಗುವ ರಸ್ತೆ ಬೀದಿಯಲ್ಲಿ ರುವ ಮರಗಳನ್ನು ತೆರವು ಗೊಳಿಸುವ ಬಗ್ಗೆ ಅರಣ್ಯ ಇಲಾಖೆಯ ವತಿಯಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಮಂಗಳೂರು ಉಪ ಅರಣ್ಯ ಸಂರಕ್ಷಣಾ ಧಿಕಾರಿ ಡಾ| ಕರಿಕಲನ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ರಾಷ್ಟ್ರೀಯ ಹೆದ್ದಾರಿ 75 ಇದರಲ್ಲಿ 17.6 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ದ ವೇಳೆ ಒಟ್ಟು 1106 ಮರಗಳನ್ನು ಕಡಿಯಲು ಒಪ್ಪಿಗೆ ಪಡೆಯವ ಉದ್ದೇಶದಿಂದ ಅಧಿಕಾರಿಗಳು ಈ ಸಭೆ ಅಯೋಜಿಸಿದ್ದರು.‌
ಈ ಸಭೆಯಲ್ಲಿ ರಸ್ತೆ ಮತ್ತು ಖಾಸಗಿ ಜಮೀನಿನಲ್ಲಿರುವ ಮರಗಳ ತೆರವು ಕಾರ್ಯ ಮಾಡಲು ಯಾವಲ್ಲಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು.


ರಸ್ತೆ ಕಾಮಗಾರಿ ಯ ಉದ್ದೇಶದಿಂದ ಕಡಿಯುವ ಮರಗಳಿಗೆ ತಗಲುವ ವೆಚ್ಚವನ್ನು ಇಲಾಖೆಯಿಂದ ಪಡೆಯಲಾಗುತ್ತದೆ ಮತ್ತು ಮುಂದಿನ ವರ್ಷ ಸಸಿಗಳನ್ನು ನೆಡಲು ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಮಾಡಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಮತ್ತು ಅಭಿವೃದ್ಧಿ ಯ ಉದ್ದೇಶದಿಂದ ಮಾಡುವ ಈ ಕಾಮಗಾರಿ ನಡೆಯಲು ಮರಗಳನ್ನು ಕಡಿಯುವುದಕ್ಕೆ ವಿರೋಧ ವಿಲ್ಲ ಎಂಬ ಅಭಿಪ್ರಾಯ ಸಭಿಕರಿಂದ ಬಂತು. ಆದರೆ ರಸ್ತೆ ಅಭಿವೃದ್ಧಿ ಸಂಧರ್ಭದಲ್ಲಿ ತಿರುಗಳವುಗಳನ್ನು ಸರಿಮಾಡಿಕೊಂಡು ಉತ್ತಮ ದರ್ಜೆಯ ರಸ್ತೆ ನಿರ್ಮಾಣ ಮಾಡಲು ಸಭೆಯಲ್ಲಿ ಭಾಗವಹಿಸದವರ ಅಹವಾಲು ಆಗಿತ್ತು.

ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇ ಗೌಡ, ಬಂಟ್ವಾಳ ವಲಯ ಅರಣ್ಯಾಧಿಕಾರಿ ಬಿ.ಸುರೇಶ್, ಉಪವಲಯ ಅರಣ್ಯಾಧಿಕಾರಿ ಪ್ರೀತಮ್ ಎಸ್, ಅನಿಲ್, ಸಿಬ್ಬಂದಿ ವಿನಯ್, ಮನೋಜ್, ಲಕ್ಮೀನಾರಾಯಣ ಮತ್ತು ಸ್ಮಿತಾ ಅವರು ಉಪಸ್ಥಿತರಿದ್ದರು. ‌

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...