ಬಂಟ್ವಾಳ: ಬಂಟ್ವಾಳ ಅಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ವಿಶ್ವನಾಥ ಚೆಂಡ್ತಿಮಾರ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಬಿಸಿರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಭಾರತೀಯ ಮಜ್ದೂರು ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷ ವಿಶ್ವನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಪಾಧ್ಯಕ್ಷ ರಾಗಿ ರಮೇಶ್, ಕಾರ್ಯದರ್ಶಿ ಯಾಗಿ ಕೃಷ್ಣ ತಲೆಂಬಿಲ, ಕೋಶಾಧಿಕಾರಿ ಯಾಗಿ ರವಿ ಸಪಲ್ಯ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಭಾರತೀಯ ಮಜ್ದೂರು ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷ ವಿಶ್ವನಾಥ ಶೆಟ್ಟಿರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ಸಂಘದ ಸಲಹೆಗಾರ, ಮಾಜಿ ಅಧ್ಯಕ್ಷ ಸದಾನಂದ ಗೌಡ ಜಿಲ್ಲಾಧ್ಯಕ್ಷ ವಸಂತ ಕುಮಾರ್ ಮಣಿಹಳ್ಳ, ಜಿಲ್ಲಾ ಕಾರ್ಯದರ್ಶಿ ಗೋಪಾಲಕೃಷ್ಣಸಂಘದ ಅಧ್ಯಕ್ಷ ಸತೀಶ್ ಭಂಡಾರಿಬೆಟ್ಟು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

