Friday, January 30, 2026

ರನ್​ವೇಯಿಂದ ಜಾರಿದ ಏರ್​ ಇಂಡಿಯಾ ವಿಮಾನ: ಅಪ್ಪಳಿಸಿದ ರಭಸಕ್ಕೆ ವಿಮಾನ ಎರಡು ಭಾಗ

ಕೇರಳ : ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕಲ್ಲಿಕೋಟೆ  ವಿಮಾನ ನಿಲ್ದಾಣ ರನ್​ವೇನಲ್ಲಿ ಸ್ಕಿಡ್​ ಆಗಿದ್ದು, ಅಪ್ಪಳಿಸಿದ ರಭಸಕ್ಕೆ ವಿಮಾನ ಎರಡು ಭಾಗವಾಗವಾದ ಘಟನೆ ರಾತ್ರಿ 7.40ರ ಸುಮಾರಿಗೆ ನಡೆದಿದೆ.

 

ಭಾರಿ ಮಳೆಯ ನಡುವೆಯೇ ರಕ್ಷಣಾ ಕಾರ್ಯ ನಡೆಯುತ್ತಿದೆ. ವಿಮಾನದ ಸಂಖ್ಯೆ IX-1344 ಆಗಿದ್ದು, ಸಾರ್ವಜನಿಕವಾಗಿ ಲಭ್ಯವಾದ ಘಟನಾವಳಿಯ ಮೊದಲ ದೃಶ್ಯಗಳಲ್ಲಿ ವಿಮಾನವು ಎರಡು ತುಂಡುಗಳಾಗಿ ಒಡೆದಿದ್ದು, ಅದರ ಅವಶೇಷಗಳು ರನ್​ವೇ ಮತ್ತು ಅದರಾಚೆಗೆ ಹರಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಸದ್ಯದ ಮಾಹಿತಿ ಪ್ರಕಾರ 10 ಕ್ಕೂ ಅಧಿಕ ಮಂದಿ ಮೃತ ಪಟ್ಟ ಶಂಕೆ ಇದ್ದು, ಅನೇಕ ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿ, ಪೊಲೀಸರು ಹಾಗೂ ಆಂಬುಲೆನ್ಸ್​ಗಳು ಕಾರ್ಯಾಚರಿಸುತ್ತಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...