Thursday, January 29, 2026

ಪುಲ್ವಾಮಾ ದಾಳಿಗೆ ಸೇಡು ತೀರಿಸಿಕೊಂಡ ಭಾರತ

ಕಾಶ್ಮೀರ: ಪುಲ್ವಾಮಾ ದಾಳಿಯ ಸೇಡು ತೀರಿಸಿಕೊಳ್ಳು ಆರಂಭಿಸಿರುವ ಭಾರತ ಮೊದಲ ಭಾಗವಾಗಿ ಮತ್ತೊಮ್ಮೆ ಪಾಕಿಸ್ತಾನಕ್ಕೆ ನುಗ್ಗಿ ಏರ್ ಸ್ಟ್ರೈಕ್’ ನಡೆಸುವ ಮೂಲಕ ಬಾಂಬ್‌ಗಳ ಸುರಿಮಳೆಗರೆದು ಪಾಕ್ ಉಗ್ರರ ಶಿಬಿರಗಳನ್ನು ನಾಶಗೊಳಿಸಲಾಗಿದೆ.

ಮಂಗಳವಾರ 12 ಮೀರಜ್ 2000 ಜೆಟ್ ವಿಮಾನವು ಬೆಳಿಗ್ಗೆ 3:30 ರ ಸುಮಾರಿಗೆ ಉಗ್ರ ನೆಲೆಯ ಏಲೆ ಬಾಂಬಿನ ಸುರಿಮಳೆಗರೆದಿದೆ ಎಂದು ಈ ವರದಿ ತಿಳಿಸಿದೆ ಭಾರತೀಯ ವಾಯುಪಡೆಯ  ಬಲಕೋಟ್, ಚಕೋಟಿ, ಮುಜಾಫರಬಾದ್ ನಲ್ಲಿರುವ ಜೈಷ್ ಉಗ್ರ ಸಂಘಟನೆಯ ನೆಲೆಗಳ ಮೇಲೆ 1,000 ಕೆಜಿ ಬಾಂಬ್‌ಗಳನ್ನು ಹಾಕುವ ಮೂಲಕ ಉಗ್ರರ ಶಿಬಿರಗಳನ್ನು ನಿರ್ನಾಮ ಮಾಡಿವೆ.

ಏರ್ ಸ್ಟ್ರೈಕ್ ನಿಂದ ಆ ಭಾಗದಲ್ಲಿ ಉಂಟಾಗಿರುವ ಹಾನಿಯ ಕುರಿತಾದ ಯಾವುದೇ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ. ಬಲಾಕೋಟ್ ಪ್ರಾಂತ್ಯದಲ್ಲಿ ಭಾರೀ ಪ್ರಮಾಣದ ಸ್ಪೋಟ ಸದ್ದು ಕೇಳಿಸಿದೆ ಎಂಬ ಮಾಹಿತಿಯೂ ಇದೀಗ ಲಭ್ಯವಾಗಿದೆ. ಈ ಎಲ್ಲಾ ಅಂಶಗಳನ್ನು ಗಮನಿಸುವಾಗ ಉಗ್ರ ನೆಲೆಗಳ ವಿರುದ್ಧ ಭಾರತೀಯ ಸೇನೆ ಮತ್ತು ವಾಯುಪಡೆ ಪ್ರತಿದಾಳಿ ನಡೆಸಿರುವ ಅಂಶ ಸ್ಪಷ್ಟವಾಗುತ್ತಿದೆ.

ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜೈಷ್ ಇ ಮೊಹಮ್ಮದ್ ಇಗ್ರ ಸಂಘಟನೆಯ ಆದಿಲ್ ದಾರ್ ಎಂಬ ಆತ್ಮಾಹುತಿ ದಾಳಿಕೋರ ಕಾರ್ ಬಾಂಬ್ ಸ್ಫೋಟಿಸಿ 44 ಯೋಧರ ಬಲಿದಾನಕ್ಕೆ ಕಾರಣವಾಗಿದ್ದ. ಅದರ ಪ್ರತೀಕಾರ ಎಂಬಂತೆ ಭಾರತ ಈಗ ಉಗ್ರನೆಲೆ ಮೇಲೆ ದಾಳಿ ನಡೆಸಿದೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...