Saturday, January 31, 2026

ಅಜ್ಮೀರ ಪ್ರವಾಸಕ್ಕೆ ತೆರಳಿದ 9 ಜನರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು

ಬಂಟ್ವಾಳ: ಅಜ್ಮೀರ ಪ್ರವಾಸಕ್ಕೆ ತೆರಳಿ ಅಲ್ಲಿಂದ ಬಳಿಕ ದೆಹಲಿಗೆ ತೆರಳಿ ವಾಪಾಸು ಆದ ಬಂಟ್ವಾಳ ತಾಲೂಕಿನ 9 ಜನರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ನಿಗಾದಲ್ಲಿ ಇಡಲಾಗಿದೆ.
ಬಂಟ್ವಾಳ ತಾಲೂಕಿನ ಕೊಳಕೆ ನಿವಾಸಿಗಳು ಕಳೆದ ವಾರ ಅಜ್ಮೀರ ಪ್ರವಾಸಕ್ಕೆ ಹೋಗಿ ವಾಪಾಸು ಆಗಿದ್ದಾರೆ.
ಬಳಿಕ ಅಲ್ಲಿಂದ ದೆಹಲಿಗೆ ಹೋಗಿ ವಾಪಾಸು ಅಗಿದ್ದರು. ಹಾಗಾಗಿ ಹೆಚ್ಚಿನ ನಿಗಾ ವಹಿಸುವ ಹಿನ್ನೆಲೆಯಲ್ಲಿ ಇವರನ್ನು ಆಸ್ಪತ್ರೆ ಯಲ್ಲಿ ದಾಖಲಿಸಲಾಗಿದೆ.
ಅವರು ಅಜ್ಮೀರ ಬಳಿಕ ದೆಹಲಿಯಿಂದ ಬಳಿಕ ನಿಜಾಮುದ್ದೀನ್ ರೈಲ್ವೆ ಸ್ಟೇಷನ್ ಹೋಗಿದ್ದರು ಎಂಬ ಮಾಹಿತಿ ಇತ್ತು.
ಅವರು ನಿಜಾಮ್ಮುದ್ದೀನ್ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿರಲಿಲ್ಲ .
ಬಳಿಕ 17 ತಾರೀಖಿನಂದು ಊರಿಗೆ ಮರಳಿದ್ದರು.
ಊರಿಗೆ ಮರಳಿ ಬಳಿಕ ಇಂದಿಗೆ 14 ದಿನಗಳು ಮುಗಿದಿದೆ. ಊರಿಗೆ ಮರಳಿದ ಬಳಿಕ ಹೋಂ ಕ್ವಾರಂಟೈನ್ ನಲ್ಲಿ ಇರಲಿಲ್ಲ ಹಾಗಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮವಾಗಿ ಮತ್ತು ಇವರೆಲ್ಲರನ್ನು ಪರೀಕ್ಷೆಗೆ ಒಳಪಡಿಸುವ ಉದ್ದೇಶದಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...