Friday, June 27, 2025

ಅಕ್ರಮ ಮರ ಸಾಗಾಟ : ಅರಣ್ಯ ಅಧಿಕಾರಿಗಳಿಂದ ದಾಳಿ

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಲಾರಿ ಸಹಿತ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ದಾಳಿಯ ವೇಳೆ ಆರೋಪಿ ಸ್ಥಳದಿಂದ  ಪರಾರಿಯಾಗಿದ್ದಾನೆ.

ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 50ಲಕ್ಷ.

ಮಂಗಳೂರು ತಾಲೂಕು ಕುರ್ನಾಡು ಗ್ರಾಮದ ಮಿತ್ತಕೊಡಿ ಎಂಬಲ್ಲಿ ಮೆಲ್ಕರ್ – ಮುದಿಪು ರಸ್ತೆ ಯಲ್ಲಿಅಕ್ರಮವಾಗಿ ರಹದಾರಿ ರಹಿತ ಮರದ ದಿಮ್ಮಿಗಳನ್ನು ಸಾಗಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು. ವಲಯ ಅರಣ್ಯಾಧಕಾರಿ ಯಾದ ಶೀರ್ಧರ್ ಪಿ ಅವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಗಳಾದ ಕೃಷ್ಣ , ವಿನಯ್ ಕುಮಾರ್, ಮೋಹನ್, ಸೋಮನ ಗೌಡ ಪಾಟೀಲ್ ಹಾಗೂ ಚಾಲಕ ಸುನಿಲ್ ಬಿ ಸಿ ಪತ್ತೆ ಹಚ್ಚಿ ಕೇಸು ದಾಖಲಿಸಿರು ತ್ತಾರೆ..ಆರೋಪಿ ಚಾಲಕನು ವಾಹನವನ್ನು ಬಿಟ್ಟು ಪರಾರಿಯಾಗಿದ್ದು ಶೋಧನಾ ಕಾರ್ಯ ಮುಂದುವರಿದು ,ಪ್ರಕರಣ ದಾಖಲಿಸಿಕೊಂಡು ಸೊತ್ತು ಮತ್ತು ವಾಹನವನ್ನು ಸರ್ಕಾರದ ಪರವಾಗಿ ಅಮಾನತು ಮಾಡಿ ಕೊಳ್ಳಲಾಯಿತು.

ಮುಂದಿನ ತನಿಖೆಯನ್ನು ಡಿಸಿಎಫ್ ಕರಿಕಳನ್ ಮತ್ತು ಎಸಿಎಫ್ ಸುಬ್ರಮಣ್ಯ ರಾವ್ ಇವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ ಶ್ರೀಧರ್ ಪೀ ನೆಡೆಸುತಿದ್ದಾರೆ..

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...