Friday, January 30, 2026

ಪರವಾನಿಗೆ ಇಲ್ಲದೇ ಲಕ್ಷಾಂತರ ರೂ ಮೌಲ್ಯದ ಕಟ್ಟಿಗೆ ಸಾಗಾಟ: ಆರೋಪಿ ಸಹಿತ ಲಾರಿ ವಶಕ್ಕೆ

ಬಂಟ್ವಾಳ: ಪರವಾನಿಗೆ ಇಲ್ಲದೇ ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಕಟ್ಟಿಗೆ ಸಾಗಿಸುತ್ತಿದ್ದ ಲಾರಿ ಸಹಿತ ಆರೋಪಿಯನ್ನು ಮಂಗಳೂರು ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಕೊಂಡು ಪ್ರಕರಣ ದಾಖಲಿಸಿದ ಘಟನೆ ಮಂಗಳೂರು ತಾಲೂಕಿನ ಸುರತ್ಕಲ್ ಎಂಬಲ್ಲಿ ನಡೆದಿದೆ.

ಆರೋಪಿ ಚಾಲಕ ಸರ್ಫರಾಜ್ ಎಂಬಾತನನ್ನು ಬಂಧಿಸಿ ಅತನ ಮೇಲೆ ಪ್ರಕರಣ ದಾಖಲಿಸಿಕೊಂಡು ಸೊತ್ತು ಮತ್ತು ವಾಹನವನ್ನು ಸರ್ಕಾರದ ಪರವಾಗಿ ಅಮಾನತು ಮಾಡಿ ಕೊಳ್ಳಲಾಯಿತು.

ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 2 ಲಕ್ಷ ಎಂದು ತಿಳಿಸಿದ್ದಾರೆ.

ಮಾ. 29ರಂದು ಸೋಮವಾರ ಮಂಗಳೂರು ತಾಲೂಕು ಸುರತ್ಕಲ್ ಗ್ರಾಮದ ಮುಕ್ಕ ಎಂಬಲ್ಲಿ ಅಕ್ರಮವಾಗಿ ರಹದಾರಿ ರಹಿತ ಕಟ್ಟಿಗೆ ಸಾಗಾಟ ಮಾಡುವ ತಕ್ಷಿರನ್ನು ಮಂಗಳೂರು ವಲಯ ಅರಣ್ಯಾಧಕಾರಿ ಯಾದ ಶ್ರೀಧರ್ ಪಿ ಅವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಗಳಾದ ಕೃಷ್ಣ , ವಿನಯ್ ಕುಮಾರ್, ಮೋಹನ್, ಸೋಮನ ಗೌಡ ಪಾಟೀಲ್ ಹಾಗೂ ಚಾಲಕ ಸುನಿಲ್ ಬಿ ಸಿ ಪತ್ತೆ ಹಚ್ಚಿ ಕೇಸು ದಾಖಲಿಸಿರು ತ್ತಾರೆ…

ಮುಂದಿನ ತನಿಖೆಯನ್ನು ಡಿಸಿಎಫ್ ಕರಿಕಳನ್ ಮತ್ತು ಎಸಿಎಫ್ ಸುಬ್ರಮಣ್ಯ ರಾವ್ ಇವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ ಶ್ರೀಧರ್ ಪೀ ನೆಡೆಸುತಿದ್ದಾರೆ..

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...