Monday, January 26, 2026

ಆಲದಪದವು ಅಕ್ಷರ ಭಾರತಿ ವಿದ್ಯಾಲಯ: ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಆಲದಪದವು ಶ್ರೀ ಹರಿ ಎಜುಕೇಶನ್ ಟ್ರಸ್ಟ್‌ನ ಅಕ್ಷರ ಭಾರತಿ ವಿದ್ಯಾಲಯ ಇದರ 2019-20ನೇ ಸಾಲಿನ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರಗಿತು.
ಮಾಜಿ ಸಚಿವ ಬಿ. ರಮಾನಾಥ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಸಂಚಾಲಕ ಮೋಹನ್ ರೈ ಅವರು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಬಿ.ಪದ್ಮಶೇಖರ್ ಜೈನ್, ಪೋಷಕ ಸಂಘದ ಅಧ್ಯಕ್ಷ ಅರುಣ್ ಐತಾಳ್, ಶ್ರೀ ಹರಿ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಭಾರತಿ ಎಸ್.ರೈ, ಶಾಲಾ ಮುಖ್ಯೋಪಾಧ್ಯಾಯ ಮೋಹನ್ ಎಚ್., ಶಾಲಾ ನಾಯಕಿ ಕ್ಷಿತಿ, ಸಮಿತಿ ಸದಸ್ಯರು, ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ರಾಜ್ಯ ಮತ್ತು ಜಿಲ್ಲಾ ಮಟ್ಟಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು . ಬಳಿಕ ವಿದ್ಯಾರ್ಥಿಗಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಂಚಾಲಕ ಮೋಹನ್ ರೈ ಕೆ. ಸ್ವಾಗತಿಸಿ, ಶಿಕ್ಷಕ ಸುಕೇಶ್ ಕೆ. ವಂದಿಸಿರು.ಶಿಕ್ಷಕಿ ಮೆಲೀನಾ ಕಾರ್ಯಕ್ರಮ ನಿರೂಪಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...