ಬೆಳ್ತಂಗಡಿ: ಎಲ್ಲೆಡೆ ಕೊರೊನಾ ಸೋಂಕು ಹಬ್ಬುತಿದ್ದು, ಈಗ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಬರಾಯದ ನಿವಾಸಿಯಾಗಿರುವ 24 ಪ್ರಾಯದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.

ಮಂಗಳೂರಿನ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತಿದ್ದ ಈತನಿಗೆ ಜ್ವರ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆದಿದ್ದ. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ತಗುಲಿದಿರುವುದು ತಿಳಿದು ಬಂದಿದೆ.
ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದೆ ಹಾಗೂ ಸೋಂಕಿತನ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

