ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬುಧವಾರ ಮತದಾನ ನಡೆಯುವ ಹಿನ್ನೆಲೆಯಲ್ಲಿ ಮೇ 8, 9, 10 ಮತ್ತು 13 ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ.


ಮೇ 8ರ ಬೆಳಗ್ಗೆ 6 ರಿಂದ 10 ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಎಲ್ಲಾದರೂ ಮರು ಮತದಾನ ನಡೆದರೆ ಅಲ್ಲಿಗೂ ಈ ಆದೇಶ ಅನ್ವಯವಾಗಲಿದೆ.
ಮೇ 13 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದ ಅಂಗಡಿಗಳು ಬಂದ್ ಆಗಲಿವೆ. ಈ ನಾಲ್ಕು ದಿನಗಳ ಅವಧಿಯಲ್ಲಿ ಮದ್ಯ ದಾಸ್ತಾನು ಮಾಡುವುದಕ್ಕೆ ಕಡಿವಾಣ ಹಾಕಬೇಕು. ಈ ಕುರಿತಂತೆ ಸಮಗ್ರ ನಿರ್ದೇಶನಗಳನ್ನು ನೀಡಬೇಕು ಎಂದು ಆಯೋಗವು ರಾಜ್ಯ ಸರಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿತ್ತು. ಅದರಂತೆ ಈಗ ಜಿಲ್ಲಾಧಿಕಾರಿಗಳು ಅಯಾ ಜಿಲ್ಲೆಗಳಲ್ಲಿ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದ್ದಾರೆ.












