Monday, January 26, 2026

ಅಳಿಕೆ: ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಾಗಾರದ ಉದ್ಘಾಟನೆ

ವಿಟ್ಲ: ಅಳಿಕೆ ಶ್ರೀಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ಪ್ರಾರ್ಥನಾ ಮಂದಿರದಲ್ಲಿ ೨೦೧೯-೨೦ನೇ ಸಾಲಿನ ಶೈಕ್ಷಣಿಕ ವರ್ಷದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಾಗಾರ ಉದ್ಘಾಟನೆಗೊಂಡಿತು.
ಶಿಬಿರ ಉದ್ಘಾಟಿಸಿದ ಅಳಿಕೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಪದ್ಮನಾಭ ಪೂಜಾರಿ ಎಸ್. ಮಾತನಾಡಿ ವಿದ್ಯಾರ್ಥಿ ಸಮುದಾಯವನ್ನು ಸಮಾಜಮುಖಿಯನ್ನಾಗಿಸಬೇಕು ಎಂಬ ಉದ್ದೇಶದಿಂದ ೧೯೬೯ ರಂದು ಗಾಂಧೀಜಿಯ ಜನ್ಮ ಶತಾಬ್ಧಿಯಂದು ಎನ್ನೆಎಸ್ಸೆಸ್ ದೇಶದಲ್ಲಿ ಆರಂಭಿಸಲಾಯಿತು. ನನಗಲ್ಲ ನಿನಗೆ ಎಂಬ ಘೋಷ ವಾಕ್ಯದೊಂದಿಗೆ ಸ್ವಾರ್ಥ ರಹಿತ ಸಮಾಜ ನಿರ್ಮಾಣವೇ ಇದರ ಗುರಿ. ಸಮಾಜದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ಶಿಬಿರಾರ್ಥಿಯು ತನ್ನನ್ನು ತೊಡಗಿಸಿಕೊಳ್ಳಲು ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಇದು ಸಹಕಾರಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಕೆ.ಎಸ್. ಕೃಷ್ಣ ಭಟ್ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ ಭಟ್ ಯಸ್., ಕಾಲೇಜಿನ ಪ್ರಿನ್ಸಿಪಾಲ್ ಡಾ| ಎಂ. ಸಿದ್ದರಾಜು ಉಪಸ್ಥಿತರಿದ್ದರು. ಯೋಜನಾಧಿಕಾರಿ ವೆಂಕಟಕೃಷ್ಣ ಶರ್ಮ ಸ್ವಾಗತಿಸಿದರು. ಉಪನ್ಯಾಸಕರಾದ ಧನಂಜಯ ಪಿ. ವಂದಿಸಿದರು. ವಿದ್ಯಾರ್ಥಿ ಅನಿರುಧ್ ಭಟ್ ನಿರೂಪಿಸಿದರು. ವಿದ್ಯಾರ್ಥಿ ದೀಪಕ್ ಹಾಡನ್ನು ಹಾಡಿದರು. ಶಿಬಿರಾರ್ಥಿಗಳು ಮತ್ತು ಉಪನ್ಯಾಸಕರು ಪಾಲ್ಗೊಂಡರು.

 

More from the blog

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...