Friday, June 27, 2025

ಅಳಿಕೆ ವಿ.ಎಸ್.ಎಸ್ ಸಂಘದಿಂದ ಕಿಟ್ ವಿತರಣೆ

ವಿಟ್ಲ: ಅಳಿಕೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಿಶೇಷ ನಿಧಿ ಮತ್ತು ನಿರ್ದೇಶಕರ ವೈಯಕ್ತಿಕ ಸಹಾಯ ಹಾಗೂ ಸಂಘದ ಉದ್ಯೋಗಿಗಳ ಒಂದು ದಿನದ ವೇತನವನ್ನು ಒಟ್ಟುಗೂಡಿಸಿ ಅತ್ಯವಶ್ಯಕ ದಿನಬಳಕೆ ಸಾಮಾಗ್ರಿಗಳ 210 ಕಿಟ್ ಅನ್ನು ಆಯ್ದ ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು.
ಆಶಾ ಕಾರ್ಯಕರ್ತರಿಗೆ ಹಾಗೂ ಆಸ್ಪತ್ರೆ ಸಿಬ್ಬಂದಿಗಳಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ಪಂಚಾಯಿತಿ ಸದಸ್ಯೆ ಮುಕಾಂಬಿಕಾ ಎಂ. ಭಟ್ ಅವರ ನೆರವಿನಿಂದ ಕಿಟ್ ವಿತರಣೆ ಮಾಡಲಾಯಿತು.
ಸಂಘದ ಅಧ್ಯಕ್ಷ ಕಾನ ಈಶ್ವರ ಭಟ್, ಉಪಾಧ್ಯಕ್ಷ ರೂಪೇಶ್ ರೈ ಜಿ. ಎನ್., ನಿರ್ದೇಶಕರಾದ ಬಿ. ತಿಮ್ಮಪ್ಪ ಶೆಟ್ಟಿ, ಸೀತಾರಾಮ ಶೆಟ್ಟಿ, ಆನಂದ ಶೆಟ್ಟಿ, ಚಂದ್ರನಾಥ ಆಳ್ವ ಎಂ., ಚಂದ್ರಾವತಿ, ವಿನಯ, ವಸಂತ ಎ., ಭಾಸ್ಕರ, ಮಹೇಶ್, ವೇದಾವತಿ, ಸುಂದರ ನಾಯ್ಕ, ವ್ಯವಸ್ಥಾಪಕ ನಿರ್ದೇಶಕ ಉಮೇಶ್ ನಾಯಕ್, ಸಿಬ್ಬಂದಿಗಳಾದ ಚಂದ್ರಹಾಸ ರೈ, ರಾಘವ, ಪ್ರೇಮ ಮತ್ತಿತರರು ಉಪಸ್ಥಿತರಿದ್ದರು.

 

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...