ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ನಡೆಯಿತು. 2018-19ನೇ ಸಾಲಿನ ಪಾಠ, ಪಠ್ಯೇತರ, ಕ್ರೀಡೆ ಮತ್ತು ವಿಶೇಷ ಸಾಧನೆ ಮಾಡಿದ ಮಕ್ಕಳಿಗೆ ಬಹುಮಾನವಿತ್ತು ಪ್ರೋತ್ಸಾಹಿಸಲಾಯಿತು. ಸುಮಾರು 40 ವರ್ಷಗಳಷ್ಟು ಅಧ್ಯಾಪಕ ವೃತ್ತಿಯಲ್ಲಿ ತೊಡಗಿಸಿಕೊಂಡು 10 ವರ್ಷಗಳ ಅಳಿಕೆ ವಿದ್ಯಾಸಂಸ್ಥೆಯಲ್ಲಿ ಸೇವೆಗೈದ ಯಂ. ಗೋಪಾಲಕೃಷ್ಣ ಭಟ್ಟರನ್ನು ಸನ್ಮಾನಿಸಲಾಯಿತು.
ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್, ಶಾಲಾಭಿವೃದ್ದಿ ಸಮಿತಿ, ಶಿಕ್ಷಕ ವೃಂದ ಮತ್ತು ಮಕ್ಕಳ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಯು. ಗಂಗಾಧರ ಭಟ್‌ರವರು ಸನ್ಮಾನಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾದ ಭಾರತ ಸೇವಾಶ್ರಮ ಕನ್ಯಾನ ಇದರ ಕಾರ್‍ಯದರ್ಶಿ ಎಸ್. ಈಶ್ವರ ಭಟ್‌ರವರು ಯಾವುದೇ ಪ್ರಶಸ್ತಿಗಿಂತಲೂ ಶಿಷ್ಯ ವೃಂದ ಗುರುಗಳ ಮೇಲೆ ಇಟ್ಟ ಪ್ರೀತಿಯೇ ಶ್ರೇಷ್ಟ ಪ್ರಶಸ್ತಿ ಎಂದು ಹೇಳಿದರು.
ಸಭೆಯಲ್ಲಿ ಸಂಚಾಲಕರಾದ ಕೆ.ಎಸ್. ಕೃಷ್ಣ ಭಟ್, ಕಾರ್‍ಯದಶಿಗಳಾದ ಎಸ್. ಚಂದ್ರಶೇಖರ ಭಟ್, ಕಾನ ಈಶ್ವರ ಭಟ್ ಹಾಗೂ ವಿಟ್ಲ ವಲಯದ ಶಿಕ್ಷಣ ಸಂಯೋಜಕಿಯಾದ ಪುಷ್ಪಾ ಉಪಸ್ಥಿತರಿದ್ದರು.
ಶಿಕ್ಷಕರಾದ ವೇಣುಗೋಪಾಲ ಶೆಟ್ಟಿಯವರು ಸನ್ಮಾನಿತರ ಬಗ್ಗೆ ಅಭಿನಂದನಾ ಭಾಷಣ ಮಾಡಿದರು. ಸಂಸ್ಥೆಯ ಆಡಳಿತಾಧಿಕಾರಿ ಮತ್ತು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಸ್. ಜನಾರ್ದನ ನಾಯಕ್ ಸನ್ಮಾನ ಪತ್ರ ವಾಚಿಸಿದರು. ಸಂಚಾ ನಿವೃತ್ತ ಮುಖ್ಯ ಶಿಕ್ಷಕರಾದ ಯಂ. ರುಕ್ಮಯ್ಯ ಗೌಡ ಸ್ವಾಗತಿಸಿದರು. ಮುಖ್ಯ ಶಿಕ್ಷಕರಾದ ಈಶ್ವರ ನಾಯ್ಕ್ ಎಸ್. ಶಾಲಾ ವರದಿ ವಾಚಿಸಿ, ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜೇಂದ್ರ ರೈ ಕಾರ್‍ಯಕ್ರಮ ನಿರೂಪಿಸಿದರು. ಬಳಿಕ ಗೋಪಾಲಕೃಷ್ಣ ಭಟ್ ನಿರ್ದೇಶಿಸಿದ ಮಾಯಾವಿ ಇಂದ್ರಾರಿ ಎಂಬ ಯಕ್ಷಗಾನ ಮಕ್ಕಳಿಂದ ಪ್ರದರ್ಶಿಸಲ್ಪಟ್ಟಿತು.
ಪೋಟೊ-೨ವಿಟಿಎಲ್-ಅಳಿಕೆ
