ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಂದ್ರೀಯ ಶಿಕ್ಷಣ ಮಂಡಳಿಯವರು ನಡೆಸಿದ ನೀಟ್ ಪರೀಕ್ಷೆಯಲ್ಲಿ ದಾಖಲೆಯ ಫಲಿತಾಂಶ ಪಡೆದುಕೊಂಡಿರುತ್ತಾರೆ. ವೈದ್ಯಕೀಯ ವಿಭಾಗಕ್ಕೆ ಸೇರ್ಪಡೆಗೊಳ್ಳಲು ನಡೆದ ಪ್ರವೇಶ ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಶೇಕಡಾ ನೂರು ಅರ್ಹತೆಯನ್ನು ಪಡೆದಿರುತ್ತಾರೆ.

ಪರೀಕ್ಷೆಗೆ ಹಾಜರಾದ 93 ವಿದ್ಯಾರ್ಥಿಗಳಲ್ಲಿ 56 ವಿದ್ಯಾರ್ಥಿಗಳು 300ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ದಾಖಲೆ ನಿರ್ಮಿಸಿದ್ದಾರೆ. 636 ಅಂಕಗಳನ್ನು ಪಡೆದ ವಿದ್ಯಾರ್ಥಿ ವಲ್ಲೀಶ ಭಟ್ ಪ್ರಥಮ ಸ್ಥಾನಿಯಾಗಿದ್ದಾರೆ.