Wednesday, July 9, 2025

ಪತ್ರಕರ್ತರ ಸಮ್ಮೇಳನದ ಆಮಂತ್ರಣಪತ್ರ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಜು.1ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ‘ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ 2019’ರ ಆಮಂತ್ರಣ ಪತ್ರಿಕೆ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಬಿಡುಗಡೆಗೊಂಡಿತು.
ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಪತ್ರಿಕಾ ಬರವಣಿಗೆ ಮೂಲಕ ನಾಡನ್ನು ತಿದ್ದುವ, ಜನರಲ್ಲಿ ತಿಳಿವಳಿಕೆ ಮೂಡಿಸುವ ಪತ್ರಕರ್ತರಿಗೆ ಇಂದು ರಕ್ಷಣೆ ಬೇಕಾಗಿದೆ. ಒಳ್ಳೆಯ ವಿಚಾರವನ್ನು ಸಮಾಜದ ಮುಂದಿಡುವ ಜತೆಗೆ ತಪ್ಪು ನಡೆದಾಗ ಎಚ್ಚರಿಸುವ ಕೆಲಸವನ್ನು ಪತ್ರಕರ್ತರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಪತ್ರಕರ್ತರ ಕೆಲಸಕ್ಕೆ ಪ್ರೋತ್ಸಾಹ ನೀಡುವ ಜತೆಯಲ್ಲಿ ಅವರಿಗೆ ಸಮಾಜದಲ್ಲಿ ರಕ್ಷಣೆ ನೀಡುವ ಕೆಲಸ ಅಗತ್ಯವಾಗಿ ನಡೆಯಬೇಕು. ಪತ್ರಕರ್ತರಿಗೆ ಭದ್ರತೆ, ಗೌರವ ನೀಡಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರ ಸಮ್ಮೇಳನ ಪೂರಕವಾಗಲಿ ಎಂದರು.
ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪಕುಮಾರ್ ಕಲ್ಕೂರ ಮಾತನಾಡಿ, ಮಂಗಳೂರು ಎಲ್ಲ ವಿಷಯದಲ್ಲಿ ಪ್ರಥಮ ಎನ್ನುವ ಹೆಗ್ಗಳಿಕೆ ಪಡೆದಿದೆ. ಪತ್ರಕರ್ತರ ಜಿಲ್ಲಾ ಮಟ್ಟದ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವ ಮೂಲಕ ರಾಷ್ಟ್ರಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಮಾದರಿ ಮತ್ತು ನಾಂದಿಯಾಗಲಿ. ಪತ್ರಕರ್ತರಿಗೆ ನಮ್ಮೆಲ್ಲರ ಪ್ರೋತ್ಸಾಹವಿದೆ. ಸಮ್ಮೇಳನಕ್ಕೂ ಸಹಕಾರ ನೀಡಲಾಗುವುದು. ಈ ಸಮ್ಮೇಳನ ರಾಷ್ಟ್ರಕ್ಕೆ ಹೊಸ ದಿಶೆ ನೀಡಲಿ ಎಂದು ಶುಭ ಹಾರೈಸಿದರು.
ಸಮ್ಮೇಳನದ ರೂಪುರೇಷೆ, ಕಾರ್ಯಕ್ರಮದ ವಿವರದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಾಹಿತಿ ನೀಡಿದರು. ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ , ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಸಮ್ಮೇಳನದ ಸಂಚಾಲಕ ಜಗನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯೆ ಸತ್ಯಾ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...