ಬಂಟ್ವಾಳ:ಈ ದೇಶ ಕಂಡ ಶ್ರೇಷ್ಠ ಆರ್ಥಿಕ ತಜ್ಞ ಸಂವಿಧಾನ ತಜ್ಞ ಪರಿವರ್ತನಾ ರಾಜಕೀಯ ಚಿಂತಕ ತಳ ಸಮುದಾಯಗಳ ವಿಮೋಚಕ ಮುಖ್ಯವಾಗಿ ಮಹಾ ಮಾನವತಾವಾದಿ ಭಾರತದ ಸಂವಿಧಾನ ಮಗುವಾಗುವಲ್ಲಿ ಅಂಬೇಡ್ಕರ್ ಅವರ ಪಾತ್ರ ಬಹು ದೊಡ್ಡದು. ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ ವಿದ್ಯಾವಂತರಾಗಿ, ಸಂಘಟಿತರಾಗಿ ಹಾಗೂ ತಮ್ಮ ಹಕ್ಕುಗಳಿಗೆ ಹೋರಾಟ ಮಾಡಿ ಎಂಬ ಮಾತು ಇಂದಿಗೂ ನೆನಪಾಗುತ್ತದೆ ಎಂದು ದೀಪ ಬೆಳಗಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರ ಜೀವನ ಚರಿತ್ರೆಯ ಬಗ್ಗೆ ಬಂಟ್ವಾಳ ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಗೂ ಭಾರತೀಯ ಜನತಾ ಪಾರ್ಟಿಯ ಎಸ್ಸಿ ಮೋರ್ಚಾದ ಮಾಜಿ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ಹೇಳಿದರು.



ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷ ಪ್ರಭಾಕರ ಶೆಟ್ಟಿ ಬೈದ ರಾಡ್ಕಾ ಅಧ್ಯಕ್ಷತೆಯನ್ನು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಗೋಳ್ತಮಜಲು ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರು ಹಾಗೂ ಸದಸ್ಯ ಗೋಪಾಲ ಪೂಜಾರಿಯವರು ಮಾತನಾಡಿದರು. ಶ್ರೀರಾಮ ವಿದ್ಯಾ ಕೇಂದ್ರದ ಪ್ರಾಧ್ಯಾಪಕ ಕುಶಾಲಪ್ಪ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಹೇಳಿದರು.

ಈ ಸಂದರ್ಭದಲ್ಲಿ ದಿವಾಕರ ಪೂಜಾರಿ, ಪುರುಷೋತ್ತಮ ಶಾಂತಿ ಪಳಿಕೆ ಪ್ರಶಾಂತ್ ಉಪಸ್ಥಿತರಿದ್ದರು.












