Thursday, January 29, 2026

ಬಾಚಕೆರೆ ಭ್ರಮರಾಂಬಿಕ ಸೇವಾ ಸಂಘ ಶ್ರೀ ಕ್ಷೇತ್ರ ಕಟೀಲಿಗೆ ಪಾದಯಾತ್ರೆ

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಬಾಚಕೆರೆ   ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ  ಶ್ರೀ ಭ್ರಮರಾಂಬಿಕ ಸೇವಾ ಸಂಘ ಇದರ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ  ಶ್ರೀ ಕ್ಷೇತ್ರ ಕಟೀಲಿಗೆ ದ್ವಿತೀಯ ವರ್ಷದ ಪಾದಯಾತ್ರೆ ಅಮ್ಮನೆಡೆಗೆ ನಮ್ಮ ನಡಿಗೆ ಕಾರ್ಯಕ್ರಮಕ್ಕೆ  ಗುರುವಾರ  ಶ್ರೀ ಕ್ಷೇತ್ರ ಬಾಚಕೆರೆಯಲ್ಲಿ ಚಾಲನೆ ನೀಡಲಾಯಿತು.

ಕ್ಷೇತ್ರದ ಧರ್ಮದರ್ಶಿ ದೇಚಪ್ಪ ಬಾಚಕೆರೆ ಅವರು ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ಶ್ರೀ ಭ್ರಮರಾಂಬಿಕಾ ಸೇವಾ ಸಂಘದ ಮೂಲಕ ಲೋಕ ಕಲ್ಯಾಣಾರ್ಥವಾಗಿ ಶ್ರೀ ಕ್ಷೇತ್ರ ಕಟೀಲಿಗೆ ನಡೆಸುವ ಪಾದಯಾತ್ರೆ ಸೇವೆಯಿಂದ ಸರ್ವರಿಗೂ ಮಂಗಳವಾಗಲಿ ಎಂದು  ಶುಭ ಹಾರೈಸಿದರು.


ದೇವಸ್ಥಾನದ ಪ್ರ. ಅರ್ಚಕ ಪ್ರಸಾದ್ ಐತಾಳ್ ಸರಪಾಡಿ ಅರಮನೆ, ಪ್ರಮುಖರಾದ ಶಂಕರ ನಾರಾಯಣ ಹೊಳ್ಳ ಸರಪಾಡಿ, ಸಾಯಿ ಶಾಂತಿ ಕೋಕಲ, ಪ್ರಸಾದ್ ಶಾಂತಿ ಬಲಯೂರು, ಸರಪಾಡಿ ಅಶೋಕ ಶೆಟ್ಟಿ, ಪುರುಷೋತ್ತಮ ಪೂಜಾರಿ ಮಜಲು, ಸಂಪತ್ ಕುಮಾರ್ ಶೆಟ್ಟಿ ಮುಂಡ್ರೇಲ್ ಗುತ್ತು, ಸಂತೋಷ್ ಶೆಟ್ಟಿ ಸರಪಾಡಿ, ಶ್ರೀ ಭ್ರಮರಾಂಬಿಕಾ ಸೇವಾ ಸಂಘದ ಅಧ್ಯಕ್ಷ ಪ್ರದೀಪ್ ರೈ ಮಾವಿನಕಟ್ಟೆ,  ಪದಾಽಕಾರಿಗಳಾದ ಪುರುಷೋತ್ತಮ ಕಾಯರ್ ಪಲ್ಕೆ, ಶಿವರಾಮ ಶೆಟ್ಟಿ ದೋಟ, ಮೋನಪ್ಪ ಪೂಜಾರಿ ಮತ್ತಿತರರು ಭಾಗವಹಿಸಿದ್ದರು. ಪಾದಯಾತ್ರೆಯಲ್ಲಿ 90 ಮಂದಿ ಭಕ್ತರು ಪಾಲ್ಗೊಂಡಿದ್ದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...