Sunday, February 1, 2026

ಅಮ್ಮುಂಜೆ: ಇಂದಿರಾ ಕ್ಷೇಮ ನಿಧಿ ಕಿಟ್ ವಿತರಣೆ

ಕೋವಿಡ್-19 ಎರಡನೇ ಅಲೆಯ ಕಠಿಣ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ, ಕೋವಿಡ್ ಪಾಸಿಟಿವ್ ಬಂದ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ನೀಡುವ ವಿಶೇಷ ಕಾರ್ಯಕ್ರಮ ಅಮ್ಮುಂಜೆ ಗ್ರಾಮದಲ್ಲಿ ನಡೆಯಿತು.

ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು,ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಭಂಡಾರಿ,ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಜಾಕ್ ಟಿಎಚ್,ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪ್ರೇಮಲತಾ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮ್ಲಾನ್ ಒಬೊರು, ಹಾಗೂ 4 ಬೂತಿನ ಅಧ್ಯಕ್ಷರುಗಳು ಹಾಗೂ ವಲಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...