ಬಂಟ್ವಾಳ: ಮುಂಬೈ ಗಾಣಿಗ ಯಾನೆ ಸಾಫಲ್ಯ ಸೇವಾ ಸಂಘದ ವತಿಯಿಂದ ಕುರ್ಲಾ ಬಂಟರ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ’ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲ್ಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಸಹಿತ ವಿವಿಧ ತಾಲೂಕಿನ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.
ಸಂಘ ಅಧ್ಯಕ್ಷ ಶ್ರೀನಿವಾಸ ಪಿ.ಸಪಲ್ಯ, ಮಾಜಿ ಅಧ್ಯಕ್ಷ ಎಂ.ಜಿ.ಕರ್ಕೇರ, ಸುಬ್ರಹ್ಮಣ್ಯ ಮಠಾಧೀಶ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ಕಟೀಲು ಕ್ಷೇತ್ರದ ಕಮಲಾದೇವಿ ಪ್ರಸಾದ ಅಸ್ರಣ್ಣ, ಉಳ್ಳಾಲ ಉಳಿಯ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಪಯ್ಯಡೆ, ಉದ್ಯಮಿ ಸುಂದರ ಸಾಲ್ಯಾನ್ ಬೆಂಗಳೂರು ಮತ್ತಿತರರು ಇದ್ದರು.

