Saturday, June 28, 2025

ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಉತ್ತಮ ಸೌಲಭ್ಯದಲ್ಲಿ ಪಡಿತರ ವಿತರಣೆ

ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಕಳ್ಳಿಗೆ ಶಾಖೆಯ ನ್ಯಾಯಬೆಲೆ ಅಂಗಡಿಯಲ್ಲಿ ಜನರಿಗೆ ಉತ್ತಮ ಸೌಲಭ್ಯದೊಂದಿಗೆ ಪಡಿತರ ವಿತರಿಸಲಾಗುತ್ತಿದೆ. ಜನರ ಅನುಕೂಲಕ್ಕಾಗಿ ಶಾಮೀಯಾನದ ವ್ಯವಸ್ಥೆಯೊಂದಿಗೆ ಕುಳಿತುಕೊಳ್ಳಲು ಸಾಮಾಜಿಕ ಅಂತರದೊಂದಿಗೆ ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ. ಸಂಸ್ಥೆಯ ವತಿಯಿಂದ ಉಚಿತವಾಗಿ ಮಾಸ್ಕ್‌ಗಳನ್ನು ವಿತರಿಸಲಾಗುತ್ತಿದೆ. ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಶಿವಪ್ರಸಾದ್ ಕನಪಾಡಿ, ನಿರ್ದೇಶಕರಾದ ಪದ್ಮನಾಭ ರಾವ್ ಕನಪಾಡಿ, ಕಳ್ಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾ ಉಪಧ್ಯಕ್ಷರಾದ ಪುರುಷ ಎನ್ ಸಾಲಿಯಾನ್ ಮತ್ತು ಪಂಚಾಯತ್ ಸದಸ್ಯರು ಸಂಘದ ಮುಖ್ಯಕಾರ್ಯನಿರ್ವಾಹಣಾ ಅಧಿಕಾರಿ, ಪಂಚಾಯತ್ ಅಭಿವೃಧ್ದಿ ಅಧಿಕಾರಿ ಎಲ್ಲರೂ ಸೇರಿ ಯಾವುದೇ ಗೊಂದಲವಿಲ್ಲದೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮೇಲ್ವಿಚಾರಣೆ ಮಾಡಿ ಎರಡು ತಿಂಗಳ ಪಡಿತರ ವಿತರಣೆ ಸುಸೂತ್ರವಾಗಿ ನಡೆಯುತ್ತಿದೆ.

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...