Sunday, February 1, 2026

ಅಮ್ಟೂರು ದೇವಮಾತ ಚರ್ಚ್ ನಲ್ಲಿ ಕಳ್ಳತನ

ಬಂಟ್ವಾಳ: ಚರ್ಚ್ ಒಂದರ ಹುಂಡಿಯಲ್ಲಿದ್ದ ಹಣ ಕಳವು ಮಾಡಿದ್ದಲ್ಲದೆ, ಚರ್ಚ್ ಒಳಗೆ ನುಗ್ಗಿ ಜಾಲಾಡಿದ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಮೊಗರ್ನಾಡು ಎಂಬಲ್ಲಿ ನಡೆದಿದೆ.


ದೇವಾಲಯದ ಎಡ ಬದಿಯ ಬಾಗಿಲನ್ನು ಮುರಿದು ಕಳ್ಳರು ಒಳಪ್ರವೇಶ ಮಾಡಿದ್ದಾರೆ. ‌ಮೊಗರ್ನಾಡು ಅಮ್ಟೂರು ದೇವಮಾತ ಚರ್ಚ್ ನ ಎದುರು ಗಡೆ ಇದ್ದ ಹುಂಡಿ ಹಾಗೂ ಚರ್ಚ್ ಒಳಗಡೆ ಮತ್ತು ಅಲ್ಲಿಯೇ ಇರುವ ಹಾಲ್ ನ ಒಳಗೆ ಇದ್ದಂತಹ ಒಟ್ಟು ನಾಲ್ಕು ಹುಂಡಿಗಳನ್ನು ಒಡೆದು ಅದರೊಳಗೆ ಇದ್ದ ಹಣವನ್ನು ಕಳವು ಮಾಡಿದ ಬಗ್ಗೆ ಮಾಹಿತಿ ದೊರೆತಿದೆ. ಅಮ್ಟೂರು ದೇವ ಮಾತ ಚರ್ಚ್ ನ ಧರ್ಮಗುರು ಡಾ. ಮಾರ್ಕ್ ಕ್ರಾಸ್ಟಲಿನೊ ಅವರು ನಗರ ಪೋಲೀಸ್ ಸ್ಟೇಷನ್ ಗೆ ಈ ಬಗ್ಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.‌
ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಎಸ್.ಐ ಸಂತೋಷ್ ಬಿ.ಪಿ. ಎ.ಎಸ್.ಐ.ಸಂಜೀವ ಕೆ.ಸಿಬ್ಬಂದಿ ಗಳಾದ ಸುರೇಶ್ ಪಡಾರ್, ಉಸ್ಮಾನ್ ವಾಲಿಕರ್, ಶ್ರೀಕಾಂತ್ ಭೇಟಿ ನೀಡಿದ್ದಾರೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...