Saturday, January 31, 2026

1ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಿಂಡಿ ಅಣೆಕಟ್ಟು-ಕಿರುಸೇತುವೆ ಕೃಷ್ಣಾಪುರದಲ್ಲಿ ಉದ್ಘಾಟನೆ

ಬಂಟ್ವಾಳ: ಅಮ್ಟೂರು ಗ್ರಾಮದ ಕೃಷ್ಣಾಪುರದಲ್ಲಿ 1 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಿಂಡಿ ಅಣೆಕಟ್ಟು-ಕಿರುಸೇತುವೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ಉಳಿಪ್ಪಾಡಿಗುತ್ತು ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕಿಂಡಿ ಅಣೆಕಟ್ಟುಗಳಿಂದ ಅಂತರ್ಜಲ ವೃದ್ಧಿಯ ಜತೆಗೆ ಕೃಷಿಕರಿಗೆ ಅನುಕೂಲವಾಗಿದೆ. ಎರಡು ಉದ್ದೇಶದಿಂದ ನಿರ್ಮಾಣಗೊಂಡಿರುವ ಇದರ ಎರಡೂ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ರಸ್ತೆ ನಿರ್ಮಿಸುವ ಕುರಿತು ಶಾಸಕರು ಭರವಸೆ ನೀಡಿದರು.

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಸ್ಥಳೀಯ ಬಿಜೆಪಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಗ್ರಾ.ಪಂ.ಸದಸ್ಯರಾದ ಎಲಿಯಾಸ್ ಡಿಸೋಜಾ, ಪ್ರೇಮಾ, ಪವಿತ್ರಾ, ಜಯಂತ, ಗೋಪಾಲಕೃಷ್ಣ ಪೂವಳ, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಶಿವಪ್ರಸನ್ನ, ಗುತ್ತಿಗೆದಾರ ಪ್ರಭಾಕರ ಹೆಗ್ಡೆ, ದೇವದಾಸ್ ಕೃಷ್ಣಾಪುರ, ಪರಮೇಶ್ವರ, ಗೋಪಾಲ ಪೂಜಾರಿ, ಜಾನ್ ಡಿಸೋಜಾ, ಚಂದು ಕೃಷ್ಣಾಪುರ ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ ತಾ.ಪಂ.ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಸ್ವಾಗತಿಸಿ, ವಂದಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...